ಮಂಗಳೂರಲ್ಲಿ ಐವರು ವೈದ್ಯರಿಗೆ ಕೊರೊನಾ ಪಾಸಿಟಿವ್ : 30 ವೈದ್ಯರು, ವೈದ್ಯಕೀಯ ಸಿಬ್ಬಂದಿಗೆ ಕ್ವಾರಂಟೈನ್

0

ಮಂಗಳೂರು : ಕೊರೊನಾ ವೈರಸ್ ಸೋಂಕು ಇದೀಗ ಕೊರೊನಾ ವಾರಿಯರ್ಸ್ ಬೆನ್ನುಬಿದ್ದಿದೆ. ಇಷ್ಟು ದಿನ ಪೊಲೀಸ್ ಸಿಬ್ಬಂಧಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಮಹಾಮಾರಿ ಇದೀಗ, ವೈದ್ಯರನ್ನೂ ಕಾಡುತ್ತಿದೆ. ಮಂಗಳೂರಲ್ಲಿ ಐದು ವೈದ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆತಂಕವನ್ನು ಮೂಡಿಸಿದೆ.

ಮಂಗಳೂರು ನಗರದ ಕೋವಿಡ್ ಆಸ್ಪತ್ರೆಯ ಓರ್ವ ಪಿಜಿ ವೈದ್ಯ, ಲೇಡಿಗೋಷನ್ ಆಸ್ಪತ್ರೆ 3 ಮಂದಿ ವೈದ್ಯರು ಹಾಗೂ ಕೆಎಂಸಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಐವರು ಪಿಜಿ ವೈದ್ಯರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ 30 ಮಂದಿ ವೈದ್ಯರು, ವೈದ್ಯಕೀಯ ಸಿಬ್ಬಂಧಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಈ ಐವರು ಕೂಡ ಅತ್ತಾವರದಲ್ಲಿನ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸವಾಗಿದ್ದರು. ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲ ಅಪಾರ್ಟ್ ಮೆಂಟ್ ನ್ನು ಸೀಲ್ ಡೌನ್ ಮಾಡಲಾಗಿದ್ದು, ವೈದ್ಯರ ಜೊತೆಗೆ ಸಂಪರ್ಕದಲ್ಲಿದ್ದವರ ಮಾಹಿತಿಯನ್ನೂ ಕೂಡ ಕಲೆ ಹಾಕುವ ಕಾರ್ಯವನ್ನು ಆರೋಗ್ಯ ಇಲಾಖೆ ಮಾಡುತ್ತಿದೆ.

ಮಂಗಳೂರು ನಗರದಲ್ಲಿ ಇಷ್ಟು ದಿನ ಜನಸಾಮಾನ್ಯರಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿತ್ತು. ಆದ್ರೀಗ ವೈದ್ಯರಿಗೆ ಕೊರೊನಾ ದೃಢಪಟ್ಟಿರುವುದು ಆತಂಕವನ್ನು ಮೂಡಿಸಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

Leave A Reply

Your email address will not be published.