ಬೆಂಗಳೂರು : ಕೊರೊನಾ ವೈರಸ್ ಮಹಾಮಾರಿ ಇದೀಗ ವಾರಿಯರ್ಸ್ ನ್ನು ಬೆಂಬಿಡದೆ ಕಾಡುತ್ತಿದೆ. ಇದೀಗ ರಾಜ್ಯದಲ್ಲಿ ಐಪಿಎಸ್ ಅಧಿಕಾರಿಯೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕೆಎಸ್ಆರ್ ಪಿ ಕಮಾಂಡೆಂಟ್ ಅಜಯ್ ಹಿಲೋರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದನ್ನು ಹಿರಿಯ ಪೊಲೀಸ್ ಅಧಿಕಾರಿಗಳೇ ಖಚಿತ ಪಡಿಸಿದ್ದಾರೆ. ಕೆಎಸ್ಆರ್ ಪಿಯಲ್ಲಿ ಹಲವು ಪೊಲೀಸ್ ಸಿಬ್ಬಂಧಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಪೊಲೀಸ್ ಸಿಬ್ಬಂಧಿಗಳಿಗೆ ಸೋಂಕು ದೃಢಪಡುವ ಮುನ್ನ ಹಾಗೂ ನಂತರದಲ್ಲಿ ಅವರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬುವ ಕಾರ್ಯವನ್ನು ಅಜಯ್ ಹಿಲೋರಿ ಅವರು ಮಾಡಿದ್ದರು. ಈ ಹಿನ್ನೆಲೆಯಲ್ಲಿಯೇ ಇದೀಗ ಕೊರೊನಾ ಸೋಂಕು ಬಂದಿರುವ ಸಾಧ್ಯತೆಯಿದೆ.

ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಜಯ್ ಹಿಲೋರಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇನ್ನು ಅಜಯ್ ಹಿಲೋರಿ ಅವರ ಸಂಪರ್ಕದಲ್ಲಿರುವವರನ್ನೂ ಕೂಡ ಪತ್ತೆ ಹಚ್ಚಿ ಕ್ವಾರಂಟೈನ್ ಗೆ ಒಳಪಡಿಸುವ ಕಾರ್ಯವನ್ನು ಆರೋಗ್ಯಾಧಿಕಾರಿಗಳು ಮಾಡುತ್ತಿದ್ದಾರೆ.