ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ

0

ಬೆಂಗಳೂರು : ಕೊರೊನಾ ಮಹಾಮಾರಿಯ ಅಬ್ಬರ ಜೋರಾಗಿದೆ. ಕಳೆದೆರಡು ದಿನಗಳ ಅವಧಿಯಲ್ಲಿ ಬರೋಬ್ಬರಿ 70ಕ್ಕೂ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಡೆಡ್ಲಿ ಕೊರೊನಾ ಮತ್ತೊಂದು ಬಲಿ ಪಡೆದಿದೆ. ಆದರೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು ನಗರ ಹೆಣ್ಣೂರಿನ ನಿವಾಸಿಯಾಗಿರುವ 57 ವರ್ಷದ ಮಹಿಳೆ ಉಸಿರಾಟದ ಸಮಸ್ಯೆಯಿಂದ ಮೇ 6ರಂದು ಬೆಂಗಳೂರಿನ ನಾರ್ತ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೇ 7ರಂದು ಮಹಿಳೆ ಸಾವನ್ನಪ್ಪಿದ್ದಾರೆ.

ವೈದ್ಯರು ಮಹಿಳೆಯ ಗಂಟಲು ದ್ರವನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಶವವನ್ನು ಮಹಿಳೆಯ ಸಂಬಂಧಿಕರಿಗೆ ಹಸ್ತಾಂತರ ಮಾಡಿರಲಿಲ್ಲ. ಆದ್ರೀಗ ಕೊರೊನಾ ತಪಸಣಾ ವರದಿಯಲ್ಲಿ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ನಾರ್ತ್ ಆಸ್ಪತ್ರೆಗೆ ಬೀಗ ಜಡಿದಿದ್ದಾರೆ. ಇನ್ನು 15 ದಿನಗಳ ಕಾಲ ನಾರ್ತ್ ಆಸ್ಪತ್ರೆ ಬಂದ ಆಗಿರಲಿದೆ. ಮಹಿಳೆಯ ಶವವನ್ನು ಸಿ.ವಿ.ರಾಮನ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ. ಶ್ರೀನಿವಾಸ್ ಅವರು ಮಾಹಿತಿ ನೀಡಿದ್ದಾರೆ. ಮಹಿಳೆಯ ಸಾವಿನೊಂದಿಗೆ ರಾಜ್ಯದಲ್ಲಿ ಡೆಡ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ ಇದೀಗ 31ಕ್ಕೆ ಏರಿಕೆಯಾಗಿದೆ.

Leave A Reply

Your email address will not be published.