ಕುಂದಾಪುರ : ಕೊರೊನಾ ವೈರಸ್ ಸೋಂಕು ಕರಾವಳಿಯಲ್ಲಿ ತನ್ನ ಆರ್ಭಟವನ್ನು ಮುಂದುವರಿಸಿದೆ. ಕೊರೊನಾ ಮಹಾಮಾರಿಗೆ ಕುಂದಾಪುರದಲ್ಲಿ 80 ವರ್ಷ ವೃದ್ದರೋರ್ವರು ಸಾವನ್ನಪ್ಪಿದ್ದಾರೆ.

ಶ್ವಾಸಕೋಶದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೃದ್ದರೋರ್ವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆಯಲ್ಲಿ ವ್ಯಕ್ತಿಯ ಗಂಟಲು ದ್ರವದ ಮಾದರಿಯನ್ನು ತಪಾಸಣೆ ನಡೆಸಲಾಗಿದ್ದು, ವರದಿಯಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದ್ರೀಗ ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಸಾವನ್ನಪಪ್ಪಿದ್ದಾರೆ. ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಕ್ಯೆ 9ಕ್ಕೆ ಏರಿಕೆಯಾಗಿದೆ.