ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಕೊರೊನಾದಿಂದಾಗಿ ಬಡವರು ತತ್ತರಿಸಿ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗಳು ಬಡವರ ಕಲ್ಯಾಣ ಯೋಜನೆಯಡಿ ಮಹಿಳೆಯರ ಜನಧನ್ ಖಾತೆಗೆಳಿಗೆ 500 ರೂಪಾಯಿಗಳನ್ನು ವರ್ಗಾಯಿಸಲಾಗಿದೆ.

ಪ್ರಧಾನಮಂತ್ರಿಗಳ ಜನಧನ್ ಯೋಜನೆಯ ಖಾತೆ ಇರುವವರ ಮಹಿಳೆಯರಿಗೆ ಏಪ್ರಿಲ್ 2020ರ ಅವಧಿಯ 500 ರೂಪಾಯಿಗಳನ್ನು ವರ್ಗಾಯಿಸಲಾಗಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ. ಹೀಗಾಗಿ ಖಾತೆದಾರರು, ಬ್ಯಾಂಕ್‌ನಿಂದ ಹಣ ಪಡೆಯುವುದಕ್ಕೆ ಏಕಕಾಲಕ್ಕೆ ಬರಬಾರದೆನ್ನುವ ಹಿನ್ನೆಲೆಯಲ್ಲಿ ಖಾತೆಗಳ ಕಡೆಯ ಅಂಕಿಗಳ ಆಧಾರದ ಮೇಲೆ ದಿನಾಂಕಗಳನ್ನು ನಿಗದಿಪಡಿಸಲಾಗಿದೆ.

0 ಅಥವಾ1 ಅಂಕೆಯಿಂದ ಕೊನೆಗೊಳ್ಳುವ ಖಾತೆ ಸಂಖ್ಯೆಯುಳ್ಳವರು ಏಪ್ರಿಲ್ 3ರಂದು, 2 ಅಥವಾ 3 ಅಂಕೆಯಿಂದ ಕೊನೆಗೊಳ್ಳುವ ಸಂಖ್ಯೆಯುಳ್ಳವರು ಏಪ್ರಿಲ್ 4ರಂದು, 4 ಅಥವಾ 5 ಅಂಕೆಯುಳ್ಳವರು ಏಪ್ರಿಲ್ 7ರಂದು, 6 ಅಥವಾ 7 ಅಂಕೆಯುಳ್ಳವರು ಏಪ್ರಿಲ್ 8ರಂದು ಹಾಗೂ 8 ಅಥವಾ 9 ಅಂಕೆಯುಳ್ಳ ಖಾತೆ ಸಂಖ್ಯೆಯುಳ್ಳವರು ಏಪ್ರಿಲ್9ರಂದು ಹಣವನ್ನು ಪಡೆದುಕೊಳ್ಳಬಹುದಾಗಿದೆ. 9ನೇ ತಾರೀಖಿ ನಂತರ ಯಾವುದೇ ಬ್ಯಾಂಕ್ ಅವಧಿಯಲ್ಲಿ ಶಾಖೆಗಳಿಗೆ ಭೇಟಿ ನೀಡಿ ಹಣ ಪಡೆದುಕೊಳ್ಳಬಹುದು. ರಾಜ್ಯ ಸರ್ಕಾರಗಳು ಸ್ಥಳೀಯವಾಗಿ ಜಿಲ್ಲಾಡಳಿತಗಳಿಗೆ ಅಗತ್ಯ ಸೂಚನೆಗಳನ್ನು ನೀಡಿ, ಪೊಲೀಸ್ ಬೆಂಬಲದೊಂದಿಗೆ ಫಲಾನುಭವಿಗಳಿಗೆ ಯಾವುದೇ ಅನುನುಕೂಲವಾಗದಂತೆ ಹಣ ವಿತರಣೆಯಾಗುವಂತೆ ನೋಡಿಕೊಳ್ಳುವಂತೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಚಿಂದ್ರ ಮಿಶ್ರಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.