ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 16ರಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಆದೇಶ ಜಾರಿ ಮಾಡಲಾಗುತ್ತದೆ. ಬುಧವಾರ ರಾತ್ರಿ 8 ಗಂಟೆಯಿಂದಲೇ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಲಾಕ್ ಡೌನ್ ಮಾಡುವಂತೆ ವಿನಂತಿಸಿಕೊಂಡಿದ್ದಾರೆ. ಅಲ್ಲದೇ ಮುಖ್ಯಮಂತ್ರಿಯವರ ಗಮನಕ್ಕೂ ತರಲಾಗಿದೆ. ಜಿಲ್ಲೆಯ ಜನರಿಗೆ ಮೂರು ದಿನಗಳ ಕಾಲ ಜನರು ಅಗತ್ಯ ವಸ್ತುಗಳ ಖರೀದಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಬುಧವಾರ ರಾತ್ರಿ 8 ಗಂಟೆಯಿಂದಲೇ ಲಾಕ್ ಡೌನ್ ಆದೇಶ ಜಾರಿಗೆ ಬರುತ್ತಿದೆ.

ರೊನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಪಾಡಬೇಕಾದ ಅಗತ್ಯವಿದೆ. ಬೆಳ್ತಂಗಡಿ, ಮೂಡಬಿದಿರೆ, ಪುತ್ತೂರು ಭಾಗಗಳಲ್ಲಿಯೂ ವರ್ತಕರು ಕೂಡ ಸ್ವಯಂಪ್ರೇರಿತರಾಗಿ ಲಾಕ್ ಡೌನ್ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.