ಕೊರೊನಾ ಸೋಂಕಿತ ಶಂಕಿತ ವ್ಯಕ್ತಿ ಎಸ್ಕೇಪ್ ! ಮಂಗಳೂರಲ್ಲಿ ಬಾರೀ ಆತಂಕ

0

ಮಂಗಳೂರು : ಶಂಕಿತ ಕೊರೊನಾ ಪತ್ತೆಯಾಗಿದ್ದ ವ್ಯಕ್ತಿ ಇದೀಗ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾರೆ. ಕೊರೊನಾ ಶಂಕಿತ ವ್ಯಕ್ತಿ ಇದೀಗ ನಾಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ನಿನ್ನೆ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ವ್ಯಕ್ತಿಯನ್ನು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ವೇಳೆಯಲ್ಲಿ ಶಂಕಿತ ಕೊರೊನಾ ಇರೋದು ಪತ್ತೆಯಾಗಿತ್ತು. ವ್ಯಕ್ತಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಐಸೋಲೇಶನ್ ವಾರ್ಡ್ ನಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು.

ವ್ಯಕ್ತಿಗೆ ಜ್ವರ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ವ್ಯಕ್ತಿಯ ರಕ್ತದ ಮಾದರಿ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಸಂಗ್ರಹಿಸಿ ಬೆಂಗಳೂರಿಗೆ ಕಳುಹಿಸಲಾಗಿದೆ. ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವೇಳೆಯಲ್ಲಿ ವ್ಯಕ್ತಿಯನ್ನು ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಲಾಗಿತ್ತು. ರಾತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಬೆಳಗಾಗುತ್ತಲೇ ವ್ಯಕ್ತಿ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾನೆ.

ಇದರಿಂದಾಗಿ ವೈದ್ಯಾಧಿಕಾರಿಗಳು ಕೂಡ ಆತಂಕಕ್ಕೆ ಒಳಗಾಗಿದ್ದಾರೆ. ವ್ಯಕ್ತಿಯ ಲ್ಯಾಬ್ ರಿಪೋರ್ಟ್ ಇನ್ನೂ ಕೈಸೇರಿಲ್ಲ. ಒಂದೊಮ್ಮೆ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟರೆ, ಇನ್ನಷ್ಟು ಮಂದಿಗೆ ಸೋಂಕು ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯ ಪೊಲೀಸರಿಗೆ ದೂರು ನೀಡಲಾಗಿದೆ. ದೂರು ಪಡೆದಿರೋ ಪೊಲೀಸರು ಶಂಕಿತ ಕೊರೊನಾ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Leave A Reply

Your email address will not be published.