ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಕೊರೊನಾ ವೈರಸ್ : ಪ್ರತಿಯೊಬ್ಬರಿಗೂ ಪರೀಕ್ಷೆ ನಡೆಸಲು ಮುಂದಾದ ಜಿಲ್ಲಾಡಳಿತ

0

ಮಂಗಳೂರು : ಕರಾವಳಿಯಲ್ಲಿ ಕೊರೊನಾ ಅಟ್ಟಹಾಸ ಮೇರೆ ಮೀರುತ್ತಿದೆ. ಈ ಹಿನ್ನೆಲೆಯಲ್ಲೀಗ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊರೊನಾ ಪರೀಕ್ಷೆಯನ್ನು ಹೆಚ್ಚಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ರತಿಯೊಬ್ಬರನ್ನೂ ಕೊರೊನಾ ತಪಾಸಣೆಗೆ ಒಳಪಡಿಸಲು ಆದೇಶಿಸಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ನ ಅಭಿವೃದ್ದಿ ಅಧಿಕಾರಿಗಳ ಸಹಕಾರ ದೊಂದಿಗೆ ಎಲ್ಲಾ ಸಾರ್ವಜನಿಕರನ್ನು ಒಂದು ವಾರಗಳ ಒಳಗಾಗಿ ತಪಾಸಣೆಯನ್ನು ನಡೆಸಿ ವರದಿಯನ್ನು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಆದೇಶ ಹೊರಡಿಸಿದ್ದಾರೆ.

ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಾವ ದಿನಾಂಕಗಳಂದು ಸಾರ್ವಜನಿಕರಿಗೆ ಕೊರೊನಾ ಪರೀಕ್ಷೆ ನಡೆಸಲಾಗುತ್ತದೆ ಅನ್ನೋ ಕುರಿತ ಮಾಹಿತಿಯನ್ನು ಕೂಡ ಬಿಡುಗಡೆ ಮಾಡಿದ್ದಾರೆ.

Leave A Reply

Your email address will not be published.