ಬಿಗ್ ಶಾಕ್ ಕೊಟ್ಟ ಕೊರೊನಾ ಹೆಮ್ಮಾರಿ : ಒಂದೇ ದಿನ 1 ಲಕ್ಷ‌ ಜನರಿಗೆ ಸೋಂಕು

ನವದೆಹಲಿ : ಕೊರೊನಾ ಹೆಮ್ಮಾರಿಯ ಆರ್ಭಟ ಹೆಚ್ಚಾಗಿದೆ ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಹೊಸ ದಾಖಲೆ ಬರೆದಿದೆ.

ದಿನೇ ದಿನೇ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,03,794 ಜನರಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಅಲ್ಲದೇ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ‌ ಎನ್ನಲಾಗುತ್ತಿದೆ.

ಕೊರೊನಾ ಮೊದಲ ಅಲೆಗಿಂತಲೂ ಎರಡನೇ ಅಲೆ ಹೆಚ್ಚು ಅಪಾಯಕಾರಿಯಾಗಿ ಮಾರ್ಪಟ್ಟಿದೆ. ಕಳೆದ‌ ಬಾರಿ ಕೊರೊನಾ 24 ಗಂಟೆಗಳ ಅವಧಿಯಲ್ಲಿ 97,894 ಜನರಿಗೆ ಸೋಂಕು ದೃಢಪಟ್ಟಿತ್ತು. ಆದೃ ಇದೀಗ ಬರೋಬ್ಬರಿ ಲಕ್ಷಕ್ಕೂ ಅಧಿಕ ಪ್ರಕರಣ ದಿನವೊಂದಕ್ಕೆ ದಾಖಲಾಗುವ ಮೂಲಕ ಆತಂಕ ಸೃಷ್ಟಿಸುತ್ತಿದೆ.

Comments are closed.