ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 9,217 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕೊರೊನಾ ಸೋಂಕಿತರ ಸಂಖ್ಯೆ ಇದೀಗ 4 ಲಕ್ಷದ ಗಡಿದಾಟಿದೆ.

ಕರ್ನಾಟಕ ರಾಜ್ಯದಲ್ಲಿ ಇದುವರೆಗೆ 4,30,947 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಪೈಕಿ ಬರೋಬ್ಬರಿ 3,22,454 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರೆ, 1,01537 ಮಂದಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 768 ಮಂದಿ ಕೊರೊನಾ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರು ಕೊರೊನಾ ಹೆಮ್ಮಾರಿಯ ಹೊಡೆತಕ್ಕ ತತ್ತರಿಸಿದೆ. ಬೆಂಗಳೂರಿನಲ್ಲಿಯೇ ಸೋಂಕಿತರ ಸಂಖ್ಯೆ ಲಕ್ಷದ ಗಡಿ ದಾಟಿದ್ದು, 1,60,205ಕ್ಕೆ ಏರಿಕೆಯಾಗಿದೆ. ಅದರಲ್ಲಿ ಸಕ್ರಿಯ ಪ್ರಕರಣಗಳು 43656. ಇಂದು ಒಂದೇ ದಿನ ಇಲ್ಲಿ 33 ಮಂದಿ ಕರೊನಾಕ್ಕೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 2,340ಕ್ಕೆ ಏರಿಕೆಯಾಗಿದೆ.
