ಬೆಂಗಳೂರು : ರಾಜ್ಯದಲ್ಲಿಂದು ಒಂದೇ ದಿನ 75 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಉಡುಪಿಯಲ್ಲಿಂದು ಬರೋಬ್ಬರಿ 27 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ರಾಜ್ಯದಲ್ಲಿ 135 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಕೊಂಚ ನೆಮ್ಮದಿ ತರಿಸಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 2493ಕ್ಕೆ ಏರಿಕೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮುಂಬೈ ಸೋಂಕು ಆತಂಕವನ್ನು ತಂದೊಡ್ಡಿದೆ. ಇಂದೂ ಕೂಡ 27 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಪೈಕಿ ಬಹುತೇಕರು ಮುಂಬೈನಿಂದ ಬಂದವರೇ ಆಗಿದ್ದಾರೆ. ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 147ಕ್ಕೆ ಏರಿಕೆಯಾಗಿದೆ.ಇನ್ನು ಬೆಂಗಳೂರಿನಲ್ಲಿ 7 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ದಕ್ಷಿಣ ಕನ್ನಡದಲ್ಲಿ 6 ಮಂದಿಗೆ ಕೊರೊನಾ ಸೊಂಕು ಬಾಧಿಸಿದೆ.

ಮಲೆನಾಡಿನ ಹಾಸನ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇಂದು ಕೂಡ 13 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಳವಾಗಿದ್ದು, ಇಂದು 7 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಕೊರೊನಾ ಸೋಂಕಿನಿಂದ ತತ್ತರಿಸಿ ಹೋಗಿರೋ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಇಂದು ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಒಟ್ಟು 6 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಉಳಿದಂತೆ ಕಳೆದೊಂದು ವಾರದಿಂದಲೂ ಯಾದಗಿರಿಯನ್ನು ಕೊರೊನಾ ಸೋಂಕು ಬೆಚ್ಚಿ ಬೀಳಿಸುತ್ತಿದ್ದು, 7 ಮಂದಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಉಳಿದಂತೆ ಚಿತ್ರದುರ್ಗದಲ್ಲಿ 6, ಚಿಕ್ಕಮಗಳೂರಿನಲ್ಲಿ 3, ಕಲಬುರಗಿ 3, ವಿಜಯಪುರ 2 ಹಾಗೂ ರಾಯಚೂರಿನಲ್ಲಿ ಓರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 2,493ಕ್ಕೆ ಏರಿಕೆಯಾಗಿದೆ.