ಉಡುಪಿಯಲ್ಲಿ 182, ದಕ್ಷಿಣ ಕನ್ನಡದಲ್ಲಿ 283 ಮಂದಿಗೆ ಸೋಂಕು : ರಾಜ್ಯದಲ್ಲಿ 90,000ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ

0

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ಕರಾವಳಿಯಲ್ಲಿ ಕೊರೊನಾ ಆರ್ಭಟ ಮುಂದುವರಿದಿದೆ. ರಾಜ್ಯದಲ್ಲಿಂದು ಕೂದ ಬರೋಬ್ಬರಿ 5,072 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 90,0942ಕ್ಕೆ ಏರಿಕೆಯಾಗಿದೆ.

ಕರಾವಳಿಯಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದೆ. ಇಂದು ದಕ್ಷಿಣ ಕನ್ನಡದಲ್ಲಿ ಬರೋಬ್ಬರಿ ದ್ವಿಶತಕದ ಗಡಿದಾಟಿದೆ. ಒಂದು ಜಿಲ್ಲೆಯಲ್ಲಿ 218 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 4,617ಕ್ಕೆ ಏರಿಕೆಯಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆಯಲ್ಲಿಯೂ ಏರಿಕೆಯನ್ನು ಕಂಡಿದೆ. ಜಿಲ್ಲೆಯಲ್ಲಿ ಒಟ್ಟು 2,127 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಇನ್ನು ಉಡುಪಿ ಜಿಲ್ಲೆಯುಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇಂದು ಜಿಲ್ಲೆಯಲ್ಲಿ ಮತ್ತೆ 182 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3218 ಕ್ಕೆ ಏರಿಕೆಯಾಗಿದೆ, ಇದುವರೆಗೆ 2008 ಮಂದಿಗೆ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ರೆ, 1,199 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಸತತ ಮೂರನೇ ದಿನ ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 5 ಸಾವಿರದ ಗಡಿದಾಟಿದೆ. ರಾಜ್ಯದಲ್ಲಿಂದು ಒಟ್ಟು 72 ಮಂದಿಯನ್ನು ಕೊರೊನಾ ಸೋಂಕು ಬಲಿಪಡೆದಿದ್ದು, ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 1,804ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 55,388 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

Leave A Reply

Your email address will not be published.