ನವದೆಹಲಿ: ಕೊರೊನಾ ವೈರಸ್ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಮದುವೆ ಸಮಾರಂಭ ಹಾಗೂ ಅಂತ್ಯಕ್ರಿಯೆಗಳಿಗೆ ನಿರ್ಬಂಧ ವಿಧಿಸಿ ದೆಹಲಿ ಸರಕಾರ ಆದೇಶ ಹೊರಡಿಸಿದ್ದು, ಸಾರ್ವಜನಿಕರು ಒಟ್ಟಾಗಿ ಸೇರುವುದರಿಂದ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ದೆಹಲಿಯಲ್ಲಿ ಶನಿವಾರ 1,558 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಇಲ್ಲಿಯವರೆಗೂ 6,55,834 ಕೊರೊನಾ ಪ್ರಕರಣ ದಾಖಲಾಗಿದೆ. ಶನಿವಾರ 974 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ(ಡಿಡಿಎಂಎ) ಶನಿವಾರ ಹೊಸ ಆದೇಶಗಳನ್ನು ಹೊರಡಿಸಿದ್ದು, ಮದುವೆ ಹಾಗೂ ಇತರ ಸಮಾರಂಭಗಳಲ್ಲಿ 200 ಪಾಲ್ಗೊಳ್ಳಬಹುದೆಂದು ಸೂಚಿಸಿದೆ. ಹೊರಾಂಗಣ ಪ್ರದೇಶಗಳಲ್ಲಿ ನಡೆಸುವ ಕಾರ್ಯಕ್ರಮಗಳಲ್ಲಿ 100 ಮಂದಿ ಹಾಗೂ ಅಂತ್ಯಕ್ರಿಯೆಯಲ್ಲಿ ಕನಿಷ್ಠ 50 ಮಂದಿ ಭಾಗವಹಿಸಬೇಕೆಂದು ತಿಳಿಸಿದೆ.
ಸಮಾರಂಭಗಳಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರಗಳನ್ನು ಕಾಯ್ದುಕೊಳ್ಳುಬೇಕು ಎಂದು ತಿಳಿಸಲಾಗಿದೆ. ಈ ಆದೇಶ ಏಪ್ರಿಲ್ 30ರವರೆಗೂ ಜಾರಿಯಲ್ಲಿರಲಿದೆ.