ಉಡುಪಿ 15, ರಾಯಚೂರು 62, ಯಾದಗಿರಿ 60 : ರಾಜ್ಯದಲ್ಲಿಂದು ಬರೋಬ್ಬರಿ 178 ಮಂದಿಗೆ ಸೋಂಕು

0

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿದೆ. ರಾಜ್ಯದಲ್ಲಿಂದು ಒಂದೇ ದಿನ ಬರೋಬ್ಬರಿ 178 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.’ರಾಯಚೂರಿನಲ್ಲಿ 62 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ ಯಾದಗಿರಿಯಲ್ಲಿ 60 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 2,711ಕ್ಕೆ ಏರಿಕೆಯಾಗಿದೆ.’

ಕೊರೊನಾ ಆತಂಕವನ್ನು ಮೂಡಿಸಿರುವ ಉಡುಪಿ ಜಿಲ್ಲೆಯಲ್ಲಿ ಇಂದೂ ಕೂಡ 15 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಲಬುರಗಿ 15ಗೆ ಕೊರೊನಾ ಸೋಂಕು ಕಾಣಿಸಿಕೊಂಡ್ರೆ, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ 9 ಮಮದಿಗೆ ಸೋಂಕು ದೃಢಪಟ್ಟಿದೆ. ಉಳಿದಂತೆ ಚಿಕ್ಕಬಳ್ಳಾಪುರ 4, ದಾವಣಗೆರೆ 4, ಮಂಡ್ಯ 2, ಮೈಸೂರು 2, ಚಿತ್ರದುರ್ಗ 1, ಶಿವಮೊಗ್ಗ, ಧಾರವಾಡ 1, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಒಂದು ಪ್ರಕರಣ ದಾಖಲಾಗಿದೆ.

ಇನ್ನು 178 ಮಂದಿ ಕೊರೊನಾ ಪೀಡಿತರ ಪೈಕಿ ಮಹಾರಾಷ್ಟ್ರದಿಂದ ಬಂದ 154 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

Leave A Reply

Your email address will not be published.