ದೇಶದಲ್ಲಿ ಕರ್ನಾಟಕ, ಮೆಟ್ರೋದಲ್ಲಿ ಬೆಂಗಳೂರು : ಕೊರೊನಾ ಚೇತರಿಕೆಯ ಪ್ರಯಾಣ ಅತೀ ಕಡಿಮೆ !

0

ಬೆಂಗಳೂರು : ಒಂದೆಡೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಬರೆಯುತ್ತಿದ್ರೆ, ಇನ್ನೊಂದೆಡೆ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ಮೃದಂಗವನ್ನು ಬಾರಿಸುತ್ತಿದೆ. ಈ ನಡುವಲ್ಲೇ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವವರ ಪಟ್ಟಿಯಲ್ಲಿ ದೇಶದಲ್ಲಿ ಕರ್ನಾಟಕ ಹಾಗೂ ಮೆಟ್ರೋ ನಗರಗಳ ಪೈಕಿ ಬೆಂಗಳೂರು ಕೊನೆಯ ಸ್ಥಾನದಲ್ಲಿ ಬಂದ್ದು ನಿಂತಿದೆ.

ಕರ್ನಾಟಕ ರಾಜ್ಯದಲ್ಲಿ ಇದುವರೆ 33,418 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ನಿತ್ಯವೂ 2 ಸಾವಿರಕ್ಕೂ ಮಿಕ್ಕಿದ ಜನರು ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಆದರೆ ಇದುವರೆಗೆ ಕೊರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಕೇವಲ 13,836 ಮಾತ್ರ. ಉಳಿದಂತೆ 19,035 ಮಂದಿ ಇಂದಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ದಾಖಲಾಗಿರುವ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಬೆಂಗಳೂರಿಗರೇ ಅತೀ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಇದುವರೆಗೆ ಒಟ್ಟು 15,329 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ಕೇವಲ 3,435 ಮಂದಿ ಮಾತ್ರವೇ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಉಳಿದಂತೆ ಬರೋಬ್ಬರಿ 11,687 ಮಂದಿ ಇಂದಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೇತರಿಕೆಯ ಪ್ರಮಾಣ ಕಡಿಮೆಯಾಗಿದ್ರೆ ಸಾವಿನ ಪ್ರಮಾಣ ಏರಿಕೆಯಾಗಿದ್ದು, ಬೆಂಗಳೂರಲ್ಲಿ 206 ಮಂದಿ ಸಾವನ್ನಪ್ಪಿದ್ರೆ, ರಾಜ್ಯದಲ್ಲಿ ಇದುವರೆಗೆ ಬರೋಬ್ಬರಿ 543 ಮಂದಿಯನ್ನು ಮಹಾಮಾರಿ ಬಲಿ ಪಡೆದಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದರೂ ಕೂಡ ಗುಣಮುಖರಾಗುತ್ತಿರುವವರ ಪ್ರಮಾಣ ಉಳಿದ ರಾಜ್ಯಗಳಿಗೆ ಹೋಲಿಸಿದ್ರೆ ತೀರಾ ಕಡಿಮೆಯಾಗಿದೆ. ಜೊತೆಗೆ ಬೆಂಗಳೂರಲ್ಲಿಯೂ ಚೇತರಿಕೆಯ ಪ್ರಮಾಣ ಇಳಿಕೆಯಾಗುತ್ತಿರುವುದು ಸಹಜವಾಗಿಯೇ ಆತಂಕಕ್ಕೆ ಕಾರಣವಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಚೇತರಿಕೆಯ ಪ್ರಮಾಣ ಶೇ.62.09ರಷ್ಟಿದೆ.

ಆದರೆ ರಾಜ್ಯದಲ್ಲಿ ಕೊರೊನಾ ಚೇತರಿಕೆಯ ಪ್ರಮಾಣ ಕೇವಲ 41.3% ಮಾತ್ರ. ಅತೀ ಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 54.40 %, ಆಂಧ್ರಪ್ರದೇಶ 51% ರಷ್ಟಿದೆ. ಕರ್ನಾಟಕವನ್ನು ಹೊರತು ಪಡಿಸಿದ್ರೆ ಅರುಣಾಚಲ ಪ್ರದೇಶದಲ್ಲಿ ಶೇ.39.7%ರಷ್ಟಿರುವ ಮೂಲಕ ದೇಶದಲ್ಲಿಯೇ ಅತೀ ಕಡಿಮೆ ಚೇತರಿಕೆಯ ಪ್ರಮಾಣವನ್ನು ಹೊಂದಿದೆ.

ಕೇವಲ ಕರ್ನಾಟಕ ಮಾತ್ರವಲ್ಲ ಮೆಟ್ರೋ ನಗರಗಳ ಪೈಕಿ ಬೆಂಗಳೂರಲ್ಲಿ ಅತೀ ಕಡಿಮೆ ಪ್ರಮಾಣದಲ್ಲಿ ಚೇತರಿಕೆಯ ಪ್ರಮಾಣವನ್ನು ಹೊಂದಿದೆ. ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದೇಶದಲ್ಲಿಯೇ ಅತೀ ಹೆಚ್ಚು ಪ್ರಮಾಣದಲ್ಲಿರುವ ದೆಹಲಿ, ಮುಂಬೈನಲ್ಲಿ ಜನರು ಕೊರೊನಾ ಸೋಂಕಿನಿಂದ ಬಹುಬೇಗನೆ ಚೇತರಿಕೆಯನ್ನು ಕಾಣುತ್ತಿದ್ದಾರೆ.

ದೆಹಲಿಯಲ್ಲಿ ದೆಹಲಿ ಶೇ.76, ಚೆನ್ನೈ ಶೇ.71, ಮುಂಬೈ ಶೇ.61.05, ಕೊಲ್ಕೊತಾ ಶೇ.59.67ರಷ್ಟಿದ್ರೆ, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಚೇತರಿಕೆಯ ಪ್ರಮಾಣ ಕೇವಲ ಶೇ.22 ರಷ್ಟು ಮಾತ್ರ. ನಿಜಕ್ಕೂ ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಪ್ರಮಾಣ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಚೇತರಿಕೆಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವುದು ನಿಜಕ್ಕೂ ಆತಂಕವನ್ನು ತಂದೊಡ್ಡಿದೆ.

Leave A Reply

Your email address will not be published.