ಬೆಂಗಳೂರು : ಕೊರೊನಾ ಮಹಾಮಾರಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಿಗ್ ಶಾಕ್ ಕೊಟ್ಟಿದೆ. ಬೆಂಗಳೂರಿನಲ್ಲಿಂದು 42 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ರಾಜ್ಯದಲ್ಲಿಂದು 120 ಮಂದಿಗೆ ಸೋಂಕು ದೃಢಪಟ್ಟಿದ್ದು ಕೊರೊನಾ ಪೀಡಿತರ ಸಂಖ್ಯೆ 6,041ಕ್ಕೆ ಏರಿಕೆಯಾಗಿದೆ.

ಕಳೆದ ಕೆಲ ದಿನಗಳಿಂದ ತಣ್ಣಗಾಗಿದ್ದ ಕೊರೊನಾ ಮಹಾಮಾರಿ ಇದೀಗ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಆರ್ಭಟಿಸಿದೆ. ಇಂದು ಒಂದೇ ದಿನ 42 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 564ಕ್ಕೆ ಏರಿಕೆಯಾಗಿದೆ. ಯಾದಗಿರಿ ಜಿಲ್ಲೆಯನ್ನು ಕೊರೊನಾ ಸದ್ಯಕ್ಕೆ ಬಿಡುವ ಲಕ್ಷಣಗಳು ಗೋಚರಿಸುತ್ತಿಲ್ಲ. ಸಿಲಿಕಾನ್ ಸಿಟಿಯಲ್ಲಿ ಇಂದು ಕೂಡ 27 ಮಂದಿಗೆ ಮಹಾಮಾರಿ ಸೋಂಕು ಒಕ್ಕರಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 669ಕ್ಕೆ ಏರಿದೆ.

ವಿಜಯಪುರದಲ್ಲಿಯೂ ಕೊರೊನಾ ಸೋಂಕು ಹೆಚ್ಚುತ್ತಿದೆ ಇಂದು 13 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕಳೆದೊಂದು ವಾರದಿಂದಲೂ ಕೊರೊನಾ ಮಹಾಮಾರಿಯಿಂದ ಆತಂಕಕ್ಕೆ ಒಳಗಾಗಿದ್ದ ಕಲಬುರಗಿ ಜಿಲ್ಲೆಯಲ್ಲಿ ಇಂದೂ ಕೂಡ ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ 780ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಎರಡನೇ ಸ್ಥಾನಕ್ಕೇರಿದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4, ಬೀದರ್ ಜಿಲ್ಲೆಯಲ್ಲಿ 5, ಧಾರವಾಡದಲ್ಲಿ 4, ಹಾಸನ ಮತ್ತು ಬಳ್ಳಾರಿಯಲ್ಲಿ ತಲಾ 3, ಬಾಗಲಕೋಟೆ, ರಾಮನಗರ ಜಿಲ್ಲೆಯಲ್ಲಿ ತಲಾ 2 ಹಾಗೂ ಬೆಳಗಾವಿಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 6,041ಕ್ಕೆ ಏರಿಕೆಯಾಗಿದೆ. ರಾಜ್ಯದಾದ್ಯಂತ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 257 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, 3,108 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಲ್ಲಿ 50 ವರ್ಷದ ವ್ಯಕ್ತಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ.