ವಲಸೆ ಕಾರ್ಮಿಕರಿಗೆ ಬಂಪರ್ ಗಿಫ್ಟ್ ಕೊಟ್ಟ ಕೇಂದ್ರ : ನರೇಗಾ ಯೋಜನೆಗೆ ಹೆಚ್ಚುವರಿ 40 ಸಾವಿರ ಕೋಟಿ ರೂ.

0

ನವದೆಹಲಿ : ಲಾಕ್ ಡೌನ್ ಹಿನ್ನೆಲೆಯಲ್ಲಿ ತಮ್ಮ ಊರುಗಳಿಗೆ ತೆರಳಿರುವ ವಲಸೆ ಕಾರ್ಮಿಕರಿಗೆ ಕೇಂದ್ರ ಸರ್ಕಾರವು ಬಂಪರ್ ಗಿಫ್ಟ್ ಕೊಟ್ಟಿದೆ. ನರೇಗಾ ಯೋಜನೆಗೆ 40 ಸಾವಿರ ಕೋಟಿ ರೂ. ಹೆಚ್ಚುವರಿ ಅನುದಾನ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಕುರಿತು ಮಾಹಿತಿ ನೀಡಿದರು. ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಬಡವರಿಗೆ ಮುಂದಿನ 2 ತಿಂಗಳು ಉಚಿತ ಧಾನ್ಯಗಳನ್ನು ವಿತರಣೆ ಮಾಡಲಾಗುವುದು. ಬಡವರ ಹಸಿವು ನೀಗುವುದು ನಮ್ಮ ಕರ್ತವ್ಯ. ನಿಟ್ಟಿನಲ್ಲಿ ಲಾಕ್ ಡೌನ್ ಘೋಷಣೆಯಾದ ನಂತರದಲ್ಲಿ ಉಚಿತವಾಗಿ ಧಾನ್ಯ, ಬೇಳೆಗಳನ್ನು ವಿತರಿಸಲಾಗಿದೆ. ದೊಡ್ಡಮಟ್ಟದ ಆಹಾರ ಸಾಮಗ್ರಿಗಳನ್ನು ಪೂರೈಕೆ ಮಾಡುವುದು ಸವಾಲಿನ ಕೆಲಸವಾಗಿತ್ತು. ಈಗಾಗಲೇ ಬಡವರಿಗೆ ಆಹಾರ ಸಾಮಗ್ರಿಗಳನ್ನು ಪೂರೈಕೆ ಮಾಡುವ ಹೊಣೆಯನ್ನು ರಾಜ್ಯ ಸರಕಾರಗಳಿಗೆ ವಹಿಸಲಾಗಿದೆ. ಈಗಾಗಲೇ ಕಿಸಾನ್ ಸಮ್ಮಾನ ಯೋಜನೆಯಡಿಯಲ್ಲಿ ದೇಶದ 8.19 ಕೋಟಿ ರೈತರಿಗೆ 16,397 ಕೋಟಿ ರೂಪಾಯಿಗಳನ್ನು ವಿತರಿಸಲಾಗುವುದು. ಆದರೆ ತಾಂತ್ರಿಕ ಕಾರಣಗಳಿಂದಾಗಿ ನೇರ ನಗದು ವರ್ಗಾವಣೆ ಸಾಧ್ಯವಾಗಿಲ್ಲ. ಇನ್ನು 20 ಕೋಟಿ ಮಹಿಳೆಯರ ಜನಧನ್ ಖಾತೆಗಳಿಗೆ 10,025 ಕೋಟಿ ರೂಪಾಯಿಗಳನ್ನು ಈಗಾಗಲೇ ಜಮೆ ಮಾಡಲಾಗಿದೆ. 2.2 ಕೋಟಿ ಕಟ್ಟಡ ಕಾರ್ಮಿಕರಿಗೆ 3,950 ಕೋಟಿ ರೂಪಾಯಿ ವರ್ಗಾಯಿಸಲಾಗಿದೆ. ಅಲ್ಲದೇ ದೇಶದಲ್ಲಿರುವ ಬಡವರಿಗಾಗಿ 6.81 ಕೋಟಿ ಗ್ಯಾಸ್ ಸಿಲಿಂಡರ್ ಗಳನ್ನು ಉಚಿತವಾಗಿ ವಿತರಿಸಲಾಗಿದೆ ಎಂದರು.

ಇನ್ನು ಲಾಕ್ ಡೌನ್ ನಲ್ಲಿ ಸಿಲುಕಿರುವ ಕಾರ್ಮಿಕರನ್ನು ತಮ್ಮ ಊರುಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ದೇಶದಾದ್ಯಂತ ಶ್ರಮಿಕ್ ರೈಲುಗಳನ್ನು ಓಡಿಸಲಾಗಿದೆ. ಶೇ.85 ರಷ್ಟು ರೈಲುಗಳ ಹಣವನ್ನು ಕೇಂದ್ರ ಸರಕಾರವೇ ಭರಿಸಿದ್ದು, ರೈಲುಗಳಿಗೆ ಉಚಿತವಾಗಿ ಊಟವನ್ನು ವಿತರಿಸಲಾಗಿದೆ. ಲಾಕ್ ಡೌನ್ ನಂತರದಲ್ಲಿ ಜನಜೀವನ ಸಹಜ ಸ್ಥಿತಿಗೆ ತರಬೇಕಿದೆ. ಉದ್ಯಮಗಳು ಒತ್ತಡ ಪರಿಸ್ಥಿತಿಯನ್ನು ಎದುರಿಸಿವೆ. ಶಿಕ್ಷಣ, ವ್ಯವಹಾರ, ಉದ್ಯಮ ಸ್ನೇಹಿ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ. ಇನ್ನು ಆರೋಗ್ಯ ಕ್ಷೇತ್ರಕ್ಕೆ 15,000 ಕೋಟಿ ರೂಪಾಯಿಯನ್ನು ನೀಡಲಾಗಿದ್ದು, ರಾಜ್ಯಗಳಿಗೆ 4,113 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಪಿಪಿಇ ಕಿಟ್, ಮಾಸ್ಕ ಖರೀದಿಗೆ 550 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗಿದೆ ಎಂದರು

Leave A Reply

Your email address will not be published.