18-44 ವಯೋಮಿತಿಯವರಿಗೆ ನಾಳೆಯಿಂದಲೇ ಕೊರೊನಾ ಲಸಿಕೆ : ಸಚಿವ ಸುಧಾಕರ್

ಬೆಂಗಳೂರು :  ರಾಜ್ಯದಾದ್ಯಂತ ಮೇ 10 ರಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ. ಲಸಿಕೆಯನ್ನು ಪಡೆದುಕೊಳ್ಳಲು ಎಲ್ಲರೂ ತಾಳ್ಮೆಯಿಂದ ಇರಬೇಕು ಎಂದುಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ನಿಟ್ಟಿನಲ್ಲಿ ಎಲ್ಲ ಕೇಂದ್ರಗಳಲ್ಲಿ ಪ್ರತ್ಯೇಕ ಸ್ಥಳ ನಿಗದಿಪಡಿಸಲಾಗಿದೆ. ಕೋವಿನ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರವೇ  ಲಸಿಕೆತನ್ನು ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಲಸಿಕೆ ನೀಡಲಾಗುವುದಿಲ್ಲ ಎಂದಿದ್ದಾರೆ.

ಸೋಮವಾರದಿಂದ  ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್‌ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಲಸಿಕೆ ನೀಡಲಾಗುತ್ತದೆ. ಜಿಲ್ಲೆಗಳಲ್ಲಿ ಆರಂಭದಲ್ಲಿ ಜಿಲ್ಲಾಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಮಾತ್ರವೇ ಲಸಿಕೆ ವಿತರಣೆ ಮಾಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾದ ನಂತರ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು ಎಂದಿದ್ದಾರೆ.

Comments are closed.