ಬ್ರಹ್ಮಾವರ : ಕೊರೊನಾ ವೈರಸ್ ಸೋಂಕು ಕೊರೊನಾ ವಾರಿಯರ್ಸ್ ಗಳನ್ನು ಬೆಂಬಿಡದೆ ಕಾಡುತ್ತಿದೆ. ಪಶುವೈದ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮಣೂರಿನಲ್ಲಿರುವ ಅವರ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಕುಂದಾಪುರ ತಾಲೂಕಿನ ಕೆದೂರಿನಲ್ಲಿರುವ ಪಶುವೈದ್ಯಕೀಯ ಚಿಕಿತ್ಸಾಲಯದ ವೈದ್ಯರಿಗೆ ಇದೀಗ ಕೊರೊನಾ ಸೋಂಕು ಪತ್ತೆಯಾಗಿದೆ. ವೈದ್ಯರು ಬ್ರಹ್ಮಾವರ ತಾಲೂಕಿನ ಮಣೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಇಂದು ಕೊರೊನಾ ತಪಾಸಣಾ ವರದಿ ಬಂದಿದ್ದು, ವೈದ್ಯರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ವೈದ್ಯರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈದ್ಯರ ಜೊತೆಗ ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ಆರೋಗ್ಯ ಸಿಬ್ಬಂದಿಗಳು ಮಾಡುತ್ತಿದ್ದಾರೆ. ವೈದ್ಯರು ವಾಸವಾಗಿದ್ದ ಮನೆಯನ್ನು ಕೋಟದ ಕಂದಾಯ ನಿರೀಕ್ಷರಾದ ರಾಜು ಅವರ ನೇತೃತ್ವದಲ್ಲಿ ಸೀಲ್ ಡೌನ್ ಮಾಡಲಾಗಿದೆ.