- Advertisement -
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೇರಿದಂತೆ ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶವನ್ನು ಹೊರಡಿಸಿದೆ.

ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ರಾಜೇಂದ್ರ ಕೆ.ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ.ರೂಪೇಶ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.



