ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರಿದ ಬೆನ್ನಲ್ಲೇ, ಡಿಸಿಎಂ ಗೋವಿಂದ್ ಕಾರಜೋಳ ಪುತ್ರನಿಗೂ ಕೊರೋನಾ ಸೋಂಕು ತಗುಲಿದ್ದು ಆರೋಗ್ಯ ಗಂಭೀರವಾಗಿದೆ.

ಈ ಹಿನ್ನೆಲೆಯಲ್ಲಿ ಡಿಸಿಎಂ ಗೋವಿಂದ್ ಕಾರಜೋಳ್ ಪುತ್ರ ಹಾಗೂ ವೈದ್ಯ ಡಾ.ಗೋಪಾಲ್ ಕಾರಜೋಳ ಅವರನ್ನು ಚೈನೈಗೆ ಏರ್ ಲಿಫ್ಟ್ ಮಾಡಲಾಗಿದೆ.

ಕಳೆದ೨೦ ದಿನಗಳಿಂದ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಡಾ.ಗೋಪಾಲ್ ಕಾರಜೋಳ ಅವರನ್ನು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಆದರೆ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೈನೈಗೆ ಕರೆದೊಯ್ಯಲಾಗಿದೆ.

ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆನೀಡಲಾಗುತ್ತಿತ್ತು.ಆದರೂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬಂದಿರಲಿಲ್ಲ.

ಬಿಜೆಪಿ ಯುವನಾಯಕರಾಗಿ ಗುರುತಿಸಿಕೊಂಡಿರುವ ಡಾ.ಗೋಪಾಲ್ ವೃತ್ತಿಯಲ್ಲಿ ವೈದ್ಯರಾಗಿದ್ದು, ನಾಗಠಾಣ್ ಕ್ಷೇತ್ರದ ಶಾಸಕರಾಗುವ ಉಮೇದುವಾರರ ಪಟ್ಟಿಯಲ್ಲಿ ಇವರ ಹೆಸರು ಇದೆ.