ಸುರತ್ಕಲ್ : ದೀಪಕ್ ರಾವ್ ಕೊಲೆ ಆರೋಪಿಯ ಹತ್ಯೆಗೆ ಯತ್ನ

ಮಂಗಳೂರು : ದೀಪಕ್ ರಾವ್ ಕೊಲೆ ಆರೋಪಿಯ ಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನ ಕಾಟಿಪಳ್ಳದಲ್ಲಿ ನಡೆದಿದೆ.

2018ರ ಜ.3ರಂದು ಮಧ್ಯಾಹ್ನ 1.30ರ ಸುಮಾರಿಗೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ದೀಪಕ್ ರಾವ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿತ್ತು. ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆಯ ಆರೋಪಿಯಾಗಿರುವ ಪಿಂಕಿ ನವಾಜ್ ಮೇಲೆ ಇಂದು ಕಾರಿ ನಲ್ಲಿ ಬಂದ 6 ಮಂದಿ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ.

ದಾಳಿಯಲ್ಲಿ ಪಿಂಕಿ ನವಾಜ್ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಲಾಗಿದೆ. ಸುರತ್ಕಲ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.

Comments are closed.