ದೆಹಲಿ ಜಮಾತ್ ನಲ್ಲಿ ಉಡುಪಿಯ 16 ಮಂದಿ : ಕರಾವಳಿಯಲ್ಲಿ ಶುರುವಾಗಿದೆ ಮತ್ತಷ್ಟು ಆತಂಕ

0

ಉಡುಪಿ : ದೆಹಲಿಯಲ್ಲಿನ ನಿಮಾಮುದ್ದೀನ್ ಜಮಾತ್ ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಉಡುಪಿಯ 16 ಮಂದಿ ಪಾಲ್ಗೊಂಡಿದ್ದರು ಅನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಉಡುಪಿ ಜಿಲ್ಲಾ ಆರೋಗ್ಯ ಇಲಾಖೆ ಈ ಮಾಹಿತಿಯನ್ನು ನೀಡಿದೆ. ದೆಹಲಿಯ ಧರ್ಮಸಭೆಯಲ್ಲಿ ಪಾಲ್ಗೊಂಡಿದ್ದ 16 ಮಂದಿಯ ಮಾಹಿತಿಯನ್ನು ಕಲೆ ಹಾಕುವ ಕಾರ್ಯವನ್ನು ಮಾಡುತ್ತಿದೆ.

ದೆಹಲಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಉಡುಪಿ ಜಿಲ್ಲೆಯ 16 ಮಂದಿ ಪಾಲ್ಗೊಂಡಿದ್ದರು ಎಂದು ತಿಳಿದುಬಂದಿದೆ. ಈ ಎಲ್ಲರ ಮಾಹಿತಿ ಸಿಕ್ಕ ನಂತರ ಅವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತದೆ. ಅಲ್ಲದೇ ಈ 16 ಮಂದಿಯ ಟ್ರಾವೆಲ್ ಹಿಸ್ಟರಿಯನ್ನು ಕಲೆ ಹಾಕಲಾಗುತ್ತದೆ.

ಈ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಹಲವರು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಕೆಲವರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ.

Leave A Reply

Your email address will not be published.