‘ಮುಂಬೈನಿಂದ ಬಂದವರಿಂದಲೇ ಕೊರೊನಾ ಜಾಸ್ತಿ’ : ಸ್ಪಷ್ಟನೆ ಕೊಟ್ಟ ವೀರೇಂದ್ರ ಹೆಗ್ಗಡೆ

0

ಧರ್ಮಸ್ಥಳ : ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬಂದಿರುವವರಿಂದ ಕೊರೋನಾ ಪ್ರಕರಣ ಜಾಸ್ತಿಯಾಗುತ್ತಿದೆ ಎಂಬ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ ಹಾಗೂ ವಿರೋಧ ಚರ್ಚೆಗೆ ಕಾರಣವಾಗಿದೆ. ಕೆಲವರು ಹೆಗ್ಗಡೆ ಅವರ ಪರವಾಗಿ ವಾದಿಸುತ್ತಿದ್ದರೆ, ಮತ್ತೆ ಕೆಲವರು ವಿರುದ್ಧವಾಗಿ ವಾದಿಸುತ್ತಿದ್ದಾರೆ. ಈ ನಡುವಲ್ಲೇ ತಮ್ಮ ಹೇಳಿಕೆಯ ಕುರಿತು ವಿರೇಂದ್ರ ಹೆಗ್ಗಡೆ ಅವರೇ ಸ್ಪಷ್ಟೀಕರಣ ನೀಡಿದ್ದಾರೆ.

ಸುದ್ದಿವಾಹಿನಿಯೊಂದರಲ್ಲಿ ದೇವಸ್ಥಾನಗಳನ್ನು ತೆರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ನೀಡುವ ವೇಳೆಯಲ್ಲಿ ಮಹಾರಾಷ್ಟ್ರದಿಂದ ಬಂದವರಿಂದ ಕರ್ನಾಟಕದಲ್ಲಿ ಕೊರೊನಾ ಹೆಚ್ಚಾಗುತ್ತಿದೆ ಎಂಬ ಅಭಿಪ್ರಾತವನ್ನು ವ್ಯಕ್ತಪಡಿಸಿದ್ದರು. ಆದರೆ ತಾವು ಹೇಳಿದ ಮಾತನ್ನ ಎಲ್ಲರೂ ಅರ್ಥಯಿಸಿಕೊಳಳಿ, ದುರುದ್ದೇಶಕ್ಕೆ ಬಳಸಬಾರದು ಎಂದಿದ್ದಾರೆ.

ಕೊರೊನಾ ವೈರಸ್ ಸೋಂಕಿನ ವಿರುದ್ದ ಧರ್ಮಸ್ಥಳ ಕ್ಷೇತ್ರ ಹಲವು ಕ್ರಮಗಳನ್ನು ಕೈಗೊಂಡಿದೆ. ಅದ್ರಲ್ಲೂ ಉದ್ಯಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯನ್ನು ಕ್ವಾರಂಟೈನ್ ಗಾಗಿ ನೀಡಲಾಗಿದ್ದು, ಜಿಲ್ಲಾಸ್ಪತ್ರೆ ಇದೀಗ ಕೋವಿಡ್ ಆಸ್ಪತ್ರೆಯನ್ನಾಗಿ ನಿರ್ಧರಿಸಿದೆ. ಇನ್ನು ಧರ್ಮಸ್ಥಳದಲ್ಲಿರುವ ರಜತಾದ್ರಿ ವಸತಿ ಗೃಹದ 300 ಕೊಠಡಿಯನ್ನು ಕ್ವಾರಂಟೈನ್ ಆಗಿ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Leave A Reply

Your email address will not be published.