ಡಿಕೆಶಿ ಬೆಂಗಾವಲು ವಾಹನದ ಮೇಲೆ ಚಪ್ಪಲಿ ಎಸೆದು ಧಿಕ್ಕಾರ ಕೂಗಿದ ಜಾರಕಿಹೊಳಿ ಬೆಂಬಲಿಗರು

ಬೆಳಗಾವಿ : ಒಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬೆಳಗಾವಿ ಗೆ ತೆರಳಿದ್ದ ಡಿ.ಕೆ.ಶಿವಕುಮಾರ್ ಗೆ ಪ್ರತಿಭಟನೆಯ ಬಿಸಿತಟ್ಟಿದ್ದು, ಕಾರಿನ ಮೇಲೆ ಚಪ್ಪಲಿ ಹಾಗೂ ಕಲ್ಲನ್ನು ಎಸೆದು ಸಾಹುಕಾರ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಿಂದ ಬೆಳಗಾವಿಗೆ ವಿಮಾನದಲ್ಲಿ ತೆರಳಿದ್ದ ಡಿ.ಕೆ.ಶಿವಕುಮಾರ್ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೋಟೆಲ್ ಗೆ ತೆರಳುತ್ತಿದ್ದ ವೇಳೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಡಿ.ಕೆ.ಶಿವಕುಮಾರ್ ಪ್ರಯಾಣಿಸುತ್ತಿದ್ದ ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ ಡಿಕೆಶಿ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ವಾಹನಗಳು ಜಖಂ ಆಗಿವೆ.

ಘಟನೆಯಲ್ಲಿ ಡಿ.ಕೆ.ಶಿವಕುಮಾರ್ ಗನ್ ಮ್ಯಾನ್ ಮೇಲೆಯೂ ಬೆಂಬಲಿಗರು ಹಲ್ಲೆ ನಡೆಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಪ್ರತಿಭಟನಾ ನಿರತರ ಮೇಲೆ ಲಾಠಿಚಾರ್ಜ್ ನಡೆಸಿದ್ದಾರೆ. ನಾಳೆ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆಯ ಹಿನ್ನೆಲೆಯಲ್ಲಿ ಡಿಕೆಶಿ ಬೆಳಗಾವಿಗೆ ತೆರಳಿದ್ದರು.

Comments are closed.