ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಹೈಕಮಾಂಡ್ ಆಯ್ಕೆ ಮಾಡಿದೆ. ಕಾಂಗ್ರೆಸ್ ಹೈಕಮಾಂಡ್‍ನಿಂದ ಅಧಿಕೃತ ಘೋಷಣೆ ಹೊರ ಬಂದ್ದಿದ್ದು, ರಾಜ್ಯ ರಾಜಕೀಯದ ಹೈಡ್ರಾಕ್ಕೆ ತೆರೆಬಿದ್ದಿದೆ.

ಮಾಜಿ ಸಿಎಂ ಸಿದ್ದರಾಮಯ್ಯನವರೇ ಶಾಸಕಾಂಗ ಸಭೆಯ ನಾಯಕ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಪುನರಾಯ್ಕೆಯಾಗಿದ್ದಾರೆ. ಇನ್ನು ಕಾರ್ಯಕಾರಿ ಅಧ್ಯಕ್ಷರನ್ನಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯದಲ್ಲಿ ನಡೆದ ಉಪಚುನಾವಣಾ ಸೋಲಿನ ಬೆನ್ನಲ್ಲೇ ನೈತಿಕ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಲ್ಪ ಮತಕ್ಕೆ ಕುಸಿದ ಬೆನ್ನಲ್ಲೇ ಹೈಕಮಾಂಡ್ ಮಹತ್ವದ ನಿರ್ಧಾರ ಪ್ರಕಟಿಸಿದೆ