
ಬೆಂಗಳೂರು : ಕೊರೊನಾ ವೈರಸ್ ಸೋಂಕು ಇದೀಗ ರಾಜಕಾರಣಿಗಳನ್ನು ಬೆಂಬಿಡದೆ ಕಾಡುತ್ತಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಇತ್ತೀಚಿಗಷ್ಟೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇದೀಗ ಡಿಕೆ ಶಿವಕುಮಾರ್ ಅವರಿಗೆ ವಕ್ಕರಿಸಿದೆ. ಜ್ವರ ಹಾಗೂ ಬೆನ್ನು ನೋವಿನಿಂದ ಬಳಲುತ್ತಿದ್ದ ಡಿಕೆ ಶಿವಕುಮಾರ್ ಅವರು ಎರಡು ದಿನಗಳ ಹಿಂದೆ ಕೊರೊನಾ ಟೆಸ್ಟ್ ಗೆ ಒಳಗಾಗಿದ್ದರು.

ಇದೀಗ ಡಿಕೆಶಿ ಅವರ ಕೊರೊನಾ ವರದಿ ಬಂದಿದ್ದು ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.