ಕೊರೊನಾ ಕಾರಣಕ್ಕೆ ಶಾಲೆ ಬಿಟ್ಟ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು ಗೊತ್ತಾ ? ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ

ಪಾಟ್ನಾ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಭಯದಲ್ಲೇ ಶಾಲೆಗೆ ಹಾಜರಾಗುತ್ತಿದ್ದಾರೆ. ಆದರೆ ಅದ್ರಲ್ಲೂ ಬಿಹಾರ ರಾಜ್ಯವೊಂದರಲ್ಲೇ ಬರೋಬ್ಬರಿ 10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಶಾಲೆಯನ್ನು ತೊರೆದಿದ್ದಾರೆ.

ಸರ್ಕಾರಿ ಶಾಲೆಗಳ 5ರಿಂದ 6ನೇ ತರಗತಿಗೆ ದಾಖಲಾದ 6 ಲಕ್ಷ ಮಕ್ಕಳು ಶಾಲೆ ತೊರೆದರೆ, 8 ಮತ್ತು 9ನೇ ತರಗತಿಯಿಂದ 4 ಲಕ್ಷ ಮಕ್ಕಳು ಶಾಲೆ ತೊರೆದಿದ್ದಾರೆ ಎನ್ನಲಾಗಿದೆ. ಶಾಲೆ ಬಿಟ್ಟ ವಿದ್ಯಾರ್ಥಿಗಳನ್ನು ಮತ್ತೆ ತರಗತಿಗಳಿಗೆ ಕರೆತರುವ ಉದ್ದೇಶದಿಂದ ಏಪ್ರಿಲ್ 1ರಿಂದ ರಾಜ್ಯಾದ್ಯಂತ ‘ಅಡ್ಮಿಷನ್ ಡ್ರೈವ್’ ಆರಂಭಿಸಲು ಬಿಹಾರ ಸರ್ಕಾರದ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ರಂಜಿತ್ ಕೆ ಸಿಂಗ್, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ವಿಶೇಷ ಅಭಿಯಾನ ಏಪ್ರಿಲ್ ನಿಂದ ನಡೆಯಲಿದೆ ಅಂತ ಖಾಸಗಿಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ದಿಂದ ಪ್ರೌಢಶಾಲೆಹಂತದ ಶಾಲಾ ಮುಖ್ಯೋಪಾಧ್ಯಾಯರಿಗೆ, ವಿದ್ಯಾರ್ಥಿಗಳ ಶಾಲೆ ಬಿಡುವುದನ್ನು ಕಡಿಮೆ ಮಾಡಲು ಹೆಚ್ಚಿನ ಪ್ರಮಾಣದಲ್ಲಿ ಪ್ರವೇಶವನ್ನು ಮತ್ತೆ ಮಾಡುವ ಕಾರ್ಯವನ್ನು ನೀಡಲಾಗಿದೆ.

Comments are closed.