ಬೆಂಗಳೂರು : ಡೆಡ್ಲಿ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಈ ನಡುವಲ್ಲೇ ರಾಜ್ಯದಲ್ಲಿ ಹೊರಗುತ್ತಿಗೆ ವೈದ್ಯರ ಹೋರಾಟ ಆರಂಭಗೊಂಡಿದೆ. ಸೇವೆ ಖಾಯಂ ಮಾಡಲು ಆಗ್ರಹಿಸಿ 507 ಮಂದಿ ಹೊರಗುತ್ತಿಗೆ ವೈದ್ಯರು ಇಂದು ಸೇವೆಗೆ ರಾಜೀನಾಮೆ ನೀಡಲಿದ್ದಾರೆ.

ರಾಜ್ಯದಲ್ಲಿ ಮೊದಲೇ ವೈದ್ಯರ ಸಮಸ್ಯೆಯಿದೆ. ಈ ನಡುವಲ್ಲೇ ಕೊರೊನಾ ತೀವ್ರತೆ ಹೆಚ್ಚುತ್ತಿದೆ. ಹೊರಗುತ್ತಿಗೆ ವೈದ್ಯರು ತಮ್ಮ ಸೇವೆಯನ್ನು ಖಾಯಂಗೊಳಿಸುವಂತೆ ರಾಜ್ಯ ಸರಕಾರ ಸಾಕಷ್ಟು ಬಾರಿ ಮನವಿ ಮಾಡಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದಲೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲೀಗ ವೈದ್ಯರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ.

ಡೆಡ್ಲಿ ಮಹಾಮಾರಿಯ ಆರ್ಭಟ ಹೆಚ್ಚುತ್ತಿರುವ ನಡುವಲ್ಲೇ ವೈದ್ಯರ ರಾಜೀನಾಮೆಯಿಂದ ರಾಜ್ಯದಲ್ಲಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಅಲ್ಲದೇ ರಾಜ್ಯ ಸರಕಾರಕ್ಕೂ ತಲೆನೋವಾಗಿ ಪರಿಣಮಿಸುವ ಸಾಧ್ಯತೆಯಿದೆ.