ಅಹಮದಾಬಾದ್ : ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಿದ್ದಾರೆ. ಟ್ರಂಪ್ ಮತ್ತು ಮೆಲೇನಿಯಾ ಅವರನ್ನು ಹೊತ್ತ ಏರ್ ಫೋರ್ಸ್ ಒನ್ ವಿಮಾನ ಅಹ್ಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಡೊನಾಲ್ಡ್ ಟ್ರಂಪ್ ಮತ್ತು ಅವರ ಪತ್ನಿ ಮೆಲೇನಿಯಾ ಅವರನ್ನು ಸ್ವಾಗತಿಸಲು ಖುದ್ಧ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ.
ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರವಾಗಿ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ ಟ್ರಂಪ್ ದಂಪತಿ, ಆಶ್ರಮದಲ್ಲಿ ಸ್ವಲ್ಪ ಹೊತ್ತು ವಿಹರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಟ್ರಂಪ್ ದಂಪತಿಗಳಿಗೆ ಆಶ್ರಯದ ಕುರಿತು ಮಾಹಿತಿಯನ್ನು ನೀಡಿದರು. ಸಬರಮತಿ ಆಶ್ರಮದಿಂದ ನೇರವಾಗಿ ಮೊಟೆರಾ ಕ್ರೀಡಾಂಗಣಕ್ಕೆ ತೆರಳಲಿದ್ದಾರೆ. ವಿಶ್ವದ ಅತೀ ದೊಡ್ಡ ಕ್ರೀಡಾಂಗಣವಾಗಿರೋ ಮೊಟೆರಾ ಸ್ಟೇಡಿಯಂ ಆನ್ನು ಡೊನಾಲ್ಡ್ ಟ್ರಂಪ್ ಉದ್ಘಾಟಿಸಲಿದ್ದಾರೆ. ಅಲ್ಲದೇ ನಮಸ್ತೆ ಟ್ರಂಪ್ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ.
ಭಾರತಕ್ಕೆ ಭೇಟಿ ನೀಡಿದ ಅಮೇರಿಕಾದ 7ನೇ ಅಧ್ಯಕ್ಷ ಅನ್ನೋ ಖ್ಯಾತಿಗೆ ಡೊನಾಲ್ಡ್ ಟ್ರಂಪ್ ಪಾತ್ರರಾಗಿದ್ದಾರೆ. ಈ ಹಿಂದೆ ಡ್ವೈಟ್ ಡಿ.ಐಸೆನ್, ರಿಚರ್ಡ್ ನಿಕ್ಸನ್, ಜಿಮ್ಮಿ ಕಾರ್ಟರ್, ಬಿಲ್ ಕ್ಲಿಂಟನ್, ಜಾರ್ಜ್ ಡಬ್ಲ್ಯು ಬುಷ್ ಹಾಗೂ ಬರಾಕ್ ಒಬಾಮಾ ಭಾರತಕ್ಕೆ ಭೇಟಿ ನೀಡಿದ್ದರು. 2015ರ ನಂತರ ಭಾರತಕ್ಕೆ ಭೇಟಿ ನೀಡುತ್ತಿರೋ ಮೊದಲ ಅಮೇರಿಕಾ ಅಧ್ಯಕ್ಷ ಎನಿಸಿಕೊಂಡಿದ್ದಾರೆ.
ಭಾರತಕ್ಕೆ ಬಂದಿಳಿದ ಅಮೇರಿಕಾ ಅಧ್ಯಕ್ಷ : ಸಬರಮತಿ ಆಶ್ರಮಕ್ಕೆ ಟ್ರಂಪ್ ಭೇಟಿ
- Advertisement -