ನವದೆಹಲಿ : ದೇಶದಾದ್ಯಂತ ಕೊರೊನಾ ಅಬ್ಬರ ಜೋರಾಗಿದೆ. ಕೇಂದ್ರ ಸರಕಾರ ದೇಶದಾದ್ಯಂತ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಮದ್ಯ ಮಾರಾಟ ಮಾಡಲು ಅಂಗಡಿಗಳನ್ನು ತೆರೆಯುವ ಬದಲು ಹೋಮ್ ಡೆಲಿವರಿ ಮಾಡಲು ಕುರಿತು ರಾಜ್ಯ ಸರಕಾರಗಳು ಚಿಂತನೆ ನಡೆಸಲಿ ಎಂದು ಸುಪ್ರೀಂ ಕೋರ್ಟ್ ಸಲಹೆ ನೀಡಿದೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶ ಜಾರಿಯಾಗುತ್ತಿದ್ದಂತೆಯೇ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಸುಮಾರು 45 ದಿನಗಳ ಕಾಲ ದೇಶದಾದ್ಯಂತ ಮದ್ಯ ಮಾರಾಟ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ಆದರೆ ಮೂರನೇ ಹಂತದ ಲಾಕ್ ಡೌನ್ ಜಾರಿಯ ಸಮಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಮದ್ಯದಂಗಡಿಗಳ ಮುಂದೆ ಮದ್ಯಪ್ರಿಯರು ಮುಗಿಬಿದ್ದಿದ್ದಾರೆ. ಇದರಿಮದಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಹಲವು ರಾಜ್ಯಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮದ್ಯವನ್ನು ಅಂಗಡಿಗಳಲ್ಲಿ ಮಾರಾಟ ಮಾಡುವ ಬದಲು ಹೋಮ್ ಡೆಲಿವರಿ ಮಾಡಲಿ. ಅಂಗಡಿಗಳಲ್ಲಿ ಮದ್ಯಮಾರಾಟದಿಂದ ಸಾಮಾಜಿಕ ಅಂತರ ಕಷ್ಟಸಾಧ್ಯ. ಹೀಗಾಗಿ ಎಲ್ಲರ ಹಿತದೃಷ್ಟಿಯಿಂದಲೂ ರಾಜ್ಯ ಸರಕಾರಗಳು ಮಳಿಗೆಗಳ ಬದಲು ಆನ್ ಲೈನ್ ಮೂಲಕ ಮನೆಗಳಿಗೆ ಮದ್ಯ ವಿತರಿಸಬೇಕೆಂದು ಸಲಹೆ ನೀಡಿದೆ.