ಬೆಂಗಳೂರು : ಕೊರೊನಾ ಲಾಕ್ ಡೌನ್ ತೆರವಾಗುತ್ತಿರೋ ಬೆನ್ನಲ್ಲೇ ರಾಜ್ಯ ಸರಕಾರ ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯ ವರೆಗೂ ಮದ್ಯ ಮಾರಾಟ ಮಾಡುವುದಕ್ಕೆ ರಾಜ್ಯ ಸರಕಾರ ಅವಕಾಶ ಕಲ್ಪಿಸಿದೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ್ದ ರಾಜ್ಯ ಸರಕಾರ ಎರಡು ತಿಂಗಳ ಬಳಿಕ ಮದ್ಯ ಮಾರಾಟಕ್ಕೆ ಷರತ್ತು ಬದ್ದ ಒಪ್ಪಿಗೆ ನೀಡಿತ್ತು. ಅಲ್ಲದೇ ರಾತ್ರಿ 7 ಗಂಟೆಯ ವರೆಗೆ ಮಾತ್ರವೇ ಮದ್ಯ ಮಾರಾಟಕ್ಕೆ ಅವಕಾಶವನ್ನು ಕಲ್ಪಿಸಿತ್ತು. ಆದ್ರೀಗ ಅವಧಿಯನ್ನು ವಿಸ್ತರಣೆ ಮಾಡಿದೆ.

ಆದರೆ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಕಡ್ಡಾಯ ಸೇರಿದಂತೆ ಹಿಂದೆ ಸೂಚಿಸಿರುವ ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.