ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಬಹಿರಂಗವಾದ ಬೆನ್ನಲ್ಲೇ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇದೀಗ ಸಿಸಿಬಿ ವಿಚಾರಣೆ ಹಾಜರಾಗಿದ್ದಾರೆ. ದಾಖಲೆಗಳ ಬ್ಯಾಗ್ ನೊಂದಿಗೆ ಇಂದ್ರಜಿತ್ ಲಂಕೇಶ್ ವಿಚಾರಣೆ ಇದೀಗ ಸ್ಯಾಂಡಲ್ ವುಡ್ ಮಂದಿಗೆ ನಡುಕ ಶುರುವಾಗಿದೆ.

ಸ್ಯಾಂಡಲ್ ವುಡ್ ಮಂದಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಕಿಂಗ್ ಪಿನ್ ಅನಿಕಾ ಬಂಧನದ ಬೆನ್ನಲ್ಲೇ ಇಂದ್ರಜಿತ್ ಲಂಕೇಶ್ ಗಂಭೀರ ಆರೋಪವನ್ನು ಮಾಡಿದ್ದರು. ಇಂದ್ರಜಿತ್ ಲಂಕೇಶ್ ಸ್ಯಾಂಡಲ್ ವುಡ್ ನಲ್ಲಿ 20 ನಟ, ನಟಿಯರು, ಮ್ಯೂಸಿಕ್ ಡೈರೆಕ್ಟರ್, ಡ್ಯಾನ್ಸರ್ ಹಾಗೂ ಖ್ಯಾತ ಪತ್ರಕರ್ತರೋರ್ವರು ದಂಧೆಯಲ್ಲಿ ಭಾಗಿಯಾಗಿದ್ದಾರೆಂಬ ಆರೋಪವನ್ನು ಮಾಡಿದ್ದರು. ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಇಂದ್ರಜಿತ್ ಲಂಕೇಶ್ ಅವರಿಗೆ ನೋಟಿಸ್ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಇಂದ್ರಜಿತ್ ಸಿಸಿಬಿ ಕಚೇರಿಗೆ ಆಗಮಿಸಿದ್ದಾರೆ. ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಬೋಳೆತ್ತಿನ್ ಇಂದ್ರಜಿತ್ ಲಂಕೇಶ್ ಅವರ ವಿಚಾರಣೆಯನ್ನು ಶುರುವಿಟ್ಟುಕೊಂಡಿದ್ದಾರೆ. ಪ್ರಮುಖವಾಗಿ ಇಂದ್ರಜಿತ್ ಲಂಕೇಶ್ ಅವರು ತಂದಿರುವ ದಾಖಲೆಗಳನ್ನು ಸಿಸಿಬಿ ಅಧಿಕಾರಿಗಳು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಡ್ರಗ್ಸ್ ಮಾಫಿಯಾದ ಬೆನ್ನಲ್ಲೇ ಇಂದ್ರಜಿತ್ ಲಂಕೇಶ್ ಅವರ ವಿಚಾರಣೆ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಕೂಡ ಇಂದ್ರಜಿತ್ ಲಂಕೇಶ್ ಅವರನ್ನು ಸುದೀರ್ಘ ಅವಧಿಯ ವರೆಗೆ ವಿಚಾರಣೆಯನ್ನು ನಡೆಸಲಿದ್ದಾರೆ.

ಡ್ರಗ್ಸ್ ಮಾಫಿಯಾದಲ್ಲಿ ಈಗಾಗಲೇ ಕಿಂಗ್ ಪಿನ್ ಅನಿಕಾ ಸುಮಾರು 13 ಮಂದಿ ನಟ, ನಟಿಯರ ಹೆಸರನ್ನು ಬಹಿರಂಗ ಪಡಿಸಿದ್ದಾಳೆ. ಅಲ್ಲದೇ ಇಂದ್ರಜಿತ್ ಲಂಕೇಶ್ ಸುಮಾರು 20 ಮಂದಿಯ ಹೆಸರನ್ನು ಸಿಸಿಬಿ ಅಧಿಕಾರಿಗಳ ಮುಂದೆ ಬಾಯ್ಬಿಡುವ ಸಾಧ್ಯತೆಯಿದೆ.

ಇಂದ್ರಜಿತ್ ಲಂಕೇಶ್ ಅವರ ಬಳಿಯಲ್ಲಿರುವ ಮಾಹಿತಿಯ ಪ್ರಕಾರ ಖ್ಯಾತ ನಾಮ ಕಲಾವಿದರು ಯಾರ್ಯಾರು ಇದ್ದಾರೆ ಅನ್ನೋದು ಬಹಿರಂಗವಾಗುವ ಸಾಧ್ಯತೆಯಿದೆ.