ಮಹಾರಾಷ್ಟ್ರ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ನಡುವಲ್ಲೇ ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಭೂ ಕಂಪನ ಸಂಭವಿಸಿದ್ದು, ಸ್ಥಳೀಯರು ಭೂಕಂಪನದ ತೀವ್ರತೆಯಿಂದ ಆತಂಕಕ್ಕೆ ಒಳಗಾಗಿದ್ದಾರೆ.

ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಮಹಾರಾಷ್ಟ್ರದ ಕರಾವಳಿ ಪ್ರದೇಶದಲ್ಲಿ ಈ ಭೂಕಂಪನ ಸಂಭವಿಸಿದೆ. ಬೆಳ್ಳಂಬೆಳಗ್ಗೆಯೇ ಕಂಪಿಸಿದ ಭೂಮಿಯಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಪಾಲ್ಘಾರ್ ಪ್ರದೇಶದಲ್ಲಿ ಕಳೆದ ಕಲ ದಿನಗಳಿಂದಲೂ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಈ ನಡುವಲ್ಲೇ ಸಂಭವಿಸಿ ಭೂ ಕುಸಿತ ಜನರನ್ನು ಆತಂಕಕ್ಕೀಡು ಮಾಡಿದೆ. ಆದರೆ ಇದುವರೆಗೆ ಯಾವುದೇ ಹಾನಿ ಸಂಭವಿಸಿದಂತೆ ವರದಿಯಾಗಿಲ್ಲ.