ವೆಂಟಿಲೇಟರ್ ಸಿಗದೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೊರೊನಾಗೆ ಬಲಿ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಸಂಖ್ಯೆ ಹೆಚ್ಚುತ್ತಿದ್ದರೆ, ಇನ್ನೊಂದೆಡೆ ಆಸ್ಪತ್ರೆಯಲ್ಲಿ ಬೆಡ್, ವೆಂಟಿಲೇಟರ್ ಸಮಸ್ಯೆ ಹೆಚ್ಚುತ್ತಿದೆ. ಇದೀಗ ವೆಂಟಿಲೇಟರ್ ಸಿಗದೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ರಮೇಶ್ (55‌ ವರ್ಷ) ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕಳೆದ 15 ದಿನಗಳಿಂದಲೂ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ ಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಪರಿಸ್ಥಿತಿ ಗಂಭೀರವಾದರೂ ವೆಂಟಿಲೇಟರ್ ಸಿಗದೆ ರಮೇಶ್ ಅವರು ಸಾವನ್ನಪ್ಪಿದ್ದಾರೆ.

ರಮೇಶ ಅವರು ಸುಮಾರು 8 ವರ್ಷಗಳಿಂದಲೂ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಜೊತೆಗೆ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಸಚಿವರ ಆಪ್ತರಿಗೆ ವೆಂಟಿಲೇಟರ್ ಸಿಗದೇ ಸಾವನ್ನಪ್ಪಿರುವುದು ಪರಿಸ್ಥಿತಿಯ ಗಂಭೀರತೆ ಯನ್ನು ತೋರಿಸುತ್ತಿದೆ. ಇನ್ನು ರಮೇಶ್ ಅವರ ನಿಧನಕ್ಕೆ ಸಚಿವ ಸುರೇಶ್ ಕುಮಾರ್ ಕಂಬನಿ ಮಿಡಿಯುತ್ತಿದ್ದಾರೆ.

Comments are closed.