ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿಧಿವಶ

0

ನವದೆಹಲಿ : ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿಧಿವಶರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. 2009 ರಿಂದ 2014 ಅವಧಿಯಲ್ಲಿ ಕರ್ನಾಟಕದ ರಾಜ್ಯಪಾಲರಾಗಿ ಅವರು ಸೇವೆ ಸಲ್ಲಿಸಿದ್ದಾರೆ. ಕೇಂದ್ರ ಕಾನೂನು ಸಚಿವರಾಗಿಯೂ ಭಾರಧ್ವಾಜ್ ಅವರು ಸೇವೆ ಸಲ್ಲಿಸಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಾಳೆ ದೆಹಲಿಯ ನಿಗಮ್ ಬೋದ್ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Leave A Reply

Your email address will not be published.