ಎತ್ತಿಗೆ ಜ್ವರ ಬಂದ್ರೆ ಕೋಣಕ್ಕೆ ಬರೆ : ಶಿಕ್ಷಕರಿಗೆ ದಸರಾ ರಜೆ ನೀಡದಿರುವುದಕ್ಕೆ ಕುಮಾರಸ್ವಾಮಿ ಆಕ್ರೋಶ

0

ಬೆಂಗಳೂರು : ರಾಜ್ಯ ಸರಕಾರ ಶಿಕ್ಷಕರಿಗೆ ಬೇಸಿಗೆ ರಜೆ ನೀಡದಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿಯೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಹಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವರ್ಷದ ಅಕ್ಟೋಬರ್ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಎಂದಿದ್ದಾರೆ. ಶಾಲೆಗೆ ಮಕ್ಕಳು ಬಾರದಿದ್ದರೂ ಕೂಡ ಶಿಕ್ಷಕರ ಸೇವೆಯನ್ನು ಹೆಚ್ಚಾಗಿ ಬಳಸಿಕೊಳ್ಳಲಾಗಿದೆ. ಮಧ್ಯಂತರ ರಜೆಯನ್ನು ಯಾವ ಪುರುಷಾರ್ಥಕ್ಕೆ ರದ್ದುಪಡಿಸಿದೆ ಎಂದು ಪ್ರಶ್ನಿಸಿದ್ದಾರೆ.

ಶಿಕ್ಷಕರನ್ನು ಗೌರವದಿಂದ ನಡೆಸಿಕೊಳ್ಭಬೇಕಾದ ಸರಕಾರ ದರ್ಪದ ಆದೇಶದ ಮೂಲಕ ಶಾಪಕ್ಕೆ ಗುರಿಯಾಗುತ್ತಿದೆ. ರಾಜ್ಯ ಸರಕಾರ ಕೂಡಲೇ ಅಕ್ಟೋಬರ್ 1 ರಂದು ಮಧ್ಯಂತರ ರಜೆಯನ್ನು ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಾಸ್ ಪಡೆದು ಶಿಕ್ಷಕರಿಗೆ ರಜೆಯನ್ನು ಘೋಷಿಸಬೇಕೆಂದು ಕುಮಾರಸ್ವಾಮಿ ಸರಕಾರಕ್ಕೆ ಆಗ್ರಹಿಸಿದ್ದಾರೆ.

Leave A Reply

Your email address will not be published.