ನವದೆಹಲಿ : ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಅವರನ್ನು ದೆಹಲಿಯ ಆರ್ಮಿ ಹಾಸ್ಪಿಟಲ್ ಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಕಳೆದ ಕೆಲವು ದಿನಗಳಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿಲ್ಲ. ಆರ್ಮಿ ಹಾಸ್ಪಿಟನ್ ನ ತಜ್ಞ ವೈದ್ಯರ ತಂಡ ಚಿಕಿತ್ಸೆಯನ್ನು ನೀಡುತ್ತಿದೆ.

ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಪ್ರಣವ್ ಮುಖರ್ಜಿ ಅವರಿಗೆ ಮೆದುಳು ಸರ್ಜರಿಯನ್ನು ಕೂಡ ಮಾಡಲಾಗಿತ್ತು. ಶಸ್ತ್ರ ಚಿಕಿತ್ಸೆಯ ನಂತರದಲ್ಲಿ ಆರೋಗ್ಯ ಸಂಪೂರ್ಣವಾಗಿ ಹದಗೆಟ್ಟಿದೆ.

ಪ್ರಣವ್ ಮುಖರ್ಜಿ ಅವರನ್ನು ತುರ್ತು ಚಿಕಿತ್ಸಾ ಘಟಕದಲ್ಲಿಯೇ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದ್ದು, ಅವರಿನ್ನೂ ವೆಂಟಿಲೇಟರ್ ಸಹಾಯದಲ್ಲೇ ಇದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.