ಚೆನ್ಮೈ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ.ಬಾಲ ಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಆರೋಗ್ಯವು ತುಂಬಾ ಆತಂಕಕಾರಿಯಾಗಿದೆ ಎಂದು ವೈದ್ಯಕೀಯ ಆಡಳಿತ ಹೇಳಿದೆ.

ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರನ್ನು ಕಳೆದ ಆಗಸ್ಟ್ 5 ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಗಸ್ಟ್ 14ರಂದು ಎಸ್.ಪಿ.ಬಿ ಅವರ ಆರೋಗ್ಯ ಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿ ಇರಿಸಿ, ವೆಂಟಿಲೇಟರ್ ಮೂಲಕ ಚಿಕಿತ್ಸೆಯನ್ನು ಕೊಡಿಸಲಾಗುತ್ತಿತ್ತು. ಸ್ವದೇಶಿ ವೈದ್ಯರ ಜೊತೆಗೆ ವಿದೇಶಿ ತಜ್ಞ ವೈದ್ಯರ ನೆರವನ್ನು ಪಡೆದು ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಆ

ದರೆ ಕಳೆದ ಕೆಲ ದಿನಗಳಿಂದ ಆರೋಗ್ಯ ಸ್ಥಿತಿ ಕೊಂಚ ಸುಧಾರಿಸಿತ್ತು. ಆದ್ರೀಗ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಹೇಳಿದೆ. ವೆಂಟಿಲೇಟರ್ ಹಾಗೂ ತೀವ್ರ ಚಿಕಿತ್ಸಾ ಘಟಕದಲ್ಲಿಯೇ ಚಿಕಿತ್ಸೆಯನ್ನು ಮುಂದುವರಿಸಲಾಗುತ್ತಿದೆ ಎಂದು ಹೇಳಿದೆ.ಇನ್ನು ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದಂತೆಯೇ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ.