ಅಂತಿಮ ವರ್ಷದ ಪದವಿ ಪರೀಕ್ಷೆ ರದ್ದು : ಪ್ರಧಾನಿ ಮೋದಿಗೆ ಸಿಎಂ ಕೇಜ್ರಿವಾಲ್ ಪತ್ರ

0

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯ ಅಂತಿಮ ಪದವಿ ತರಗತಿಗಳ ಪರೀಕ್ಷೆಯನ್ನು ರದ್ದುಗೊಳಿಸುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪ್ರಥಮ ಹಾಗೂ ದ್ವಿತೀಯ ಪದವಿ ತರಗತಿಗಳ ಪರೀಕ್ಷೆಗಳನ್ನು ರದ್ದು ಮಾಡಿತ್ತು. ಹಿಂದಿನ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ತೇರ್ಗಡೆ ಮಾಡುವಂತೆ ಸೂಚನೆಯನ್ನು ನೀಡಿತ್ತು. ಆದರೆ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅಂತಿಮ ವರ್ಷದ ಪದವಿ ತರಗತಿಗಳಿಗೆ ಪರೀಕ್ಷೆ ನಡೆಸಲು ನಿರ್ದೇಶನವನ್ನು ನೀಡಿದೆ. ಕೊರೊನಾ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನು ರದ್ದು ಮಾಡಿವಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಕೊರೊನಾ ಸೋಂಕು ಹರಡುತ್ತಿರುವ ಸಂದರ್ಭದಲ್ಲಿ ಪರೀಕ್ಷೆಯ ನಡೆಸುವುದು ಸೂಕ್ತವಲ್ಲ. ಪರೀಕ್ಷೆಗಳನ್ನು ನಡೆಸಿದ್ರೆ ಕೊರೊನಾ ಸೋಂಕು ಇನ್ನಷ್ಟು ವ್ಯಾಪಕವಾಗಿ ಹರಡುವ ಸಾಧ್ಯತೆಯಿದೆ. ಹೀಗಾಗಿ ಪರೀಕ್ಷೆಯನ್ನು ರದ್ದು ಮಾಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

Leave A Reply

Your email address will not be published.