ರೋಬೋ ಸಾಫ್ಟ್ ಸಾಫ್ಟ್ ವೇರ್ ಕಂಪೆನಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಮೌಲ್ಯದ ನಷ್ಟ

ಉಡುಪಿ : ಪ್ರತಿಷ್ಠಿತ ರೋಬೋ ಸಾಫ್ಟ್ ಸಾಫ್ಟವೇರ್ ಕಂಪೆನಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ನಷ್ಟ ಸಂಭವಿಸಿದೆ.

ಶುಕ್ರವಾರ ಮಧ್ಯ ರಾತ್ರಿಯ ವೇಳೆಯಲ್ಲಿ ಕಂಪೆನಿಯ ತಳ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಕಂಪೆನಿಯ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿದ್ದಾರೆ. ಬೆಂಕಿ ತಹಬದಿಗೆ ಬಾರದೇ ಇದ್ದಾಗ ಉಡುಪಿಯ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಒಂದೂವರೆ ಗಂಟೆಗಳ ಕಾಲ ಕಾರ್ಯಾಚರಣೆಯನ್ನು ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸಿಬ್ಬಂದಿಗಳು ವರ್ಕ್ ಫ್ರಂ ಹೋಮ್ ನಲ್ಲಿದ್ದರು. ಇದರಿಂದಾಗಿ ಬಾರಿ ದುರಂತವೊಂದು ತಪ್ಪಿದಂತಾಗಿದೆ. ಅಗ್ನಿ ಅವಘಡದಿಂದಾಗಿ ಸಾಪ್ಟ್ ವೇರ್ ಸರ್ವರ್ ಗಳು ಸುಟ್ಟು ಹೋಗಿದ್ದು, ಸುಮಾರು 60 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

Comments are closed.