ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರ ಕಾರು ಮಂಗಳೂರು ನಗರ ನಂತೂರು ಬಳಿಯಲ್ಲಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ದಯಾನಂದ ಕತ್ತಲ್ ಸಾರ್ ಅವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮುಂಜಾನೆ ಮಂಗಳೂರು ನಗರದ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಮೀನಿನ ಲಾರಿ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.