ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸ್ಯಾಂಡಲ್ ಡ್ರಗ್ಸ್ ಪ್ರಕರಣದಲ್ಲಿನ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ಮಾಜಿ ಸಚಿವರ ಪುತ್ರನಾಗಿರುವ ದರ್ಶನ್ ಲಮಾಣಿಯನ್ನು ಕೆ.ಜಿ.ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪೆಡ್ಲರ್ ಸುಜಯ್ ಎಂಬಾತನನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದರು. ಪ್ರಕರಣದಲ್ಲಿ ಭಾಗಿಯಾಗಿದ್ದ ಹೇಮಂತ್ ಹಾಗೂ ಸುಶಿಶ್ ಎಂಬವರು ತಲೆ ಮರೆಯಿಸಿಕೊಂಡಿದ್ದರು.

ಡ್ರಗ್ಸ್ ಪಡ್ಲರ್ ಗಳಾದ ಹೇಮಂತ್ ಹಾಗೂ ಸುಶಿಶ್ ಗೆ ಗೋವಾದಲ್ಲಿ ದರ್ಶನ್ ಆಶ್ರಯ ನೀಡಿದ ಆರೋಪಗಳು ಕೇಳಿ ಬಂದಿವೆ. ಅಲ್ಲದೇ ದರ್ಶನ್ ಲಮಾಣಿ ಸಹ ಆರೋಪಿಗಳಿಬ್ಬರ ಜೊತೆ ನಿಕಟ ಸಂಪರ್ಕ ಮತ್ತು ಅವರ ಜೊತೆಯಲ್ಲಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮೂವರನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.