ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ : ಇಬ್ಬರು ಸಾವು

ಹುಬ್ಬಳ್ಳಿ: ಇನ್ನೋವಾ ಹಾಗೂ ಬಲೆನೋ ಕಾರಿನ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗದಗ – ಹುಬ್ಬಳ್ಳಿ ರಸ್ತೆಯ ಬಂಡಿವಾಳದಲ್ಲಿ ನಡೆದಿದೆ.

ಗದಗದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಹುಬ್ಬಳ್ಳಿಯಿಂದ ಗದಗಕ್ಕೆ ಬರುತ್ತಿದ್ದ ಬಲೆನೋ ಕಾರಿಗೆ ಢಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಧಾರವಾಡ ಮೂಲದ ಸ್ಮಿತಾ ಕಟ್ಟಿ ಹಾಗೂ ಇನ್ನೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಅಪಘಾತಕ್ಕೆ ಒಳಗಾಗಿರುವ ಇನ್ನೋವಾ ಕಾರು ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ್ದಾಗಿದೆ ಎಂದು ಹೇಳಲಾಗುತ್ತಿದ್ದು, ಕಾರಿನಲ್ಲಿ ಉಮಾಶ್ರೀ ಅವರಿಗೆ ಸೇರಿದ ದಾಖಲೆಗಳು ಪತ್ತೆಯಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.