ಮೈಸೂರು : ಪ್ರೇಮಾಕುಮಾರಿಗೆ ಮೈಸೂರು ಶಾಸಕ ರಾಮದಾಸ್ ಅವರು ವಂಚನೆ ನಡೆಸಿ, ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಜಿಲ್ಲಾ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ರಾಜ್ಯದಾದ್ಯಂತ ಬಾರೀ ಸುದ್ದಿಯಾಗಿದ್ದ ರಾಮದಾಸ್ ಮತ್ತು ಪ್ರೇಮಕುಮಾರ್ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಪ್ರೇಮಾಕುಮಾರಿ ಪ್ರಕರಣದಲ್ಲಿ ರಾಮದಾಸ್ ಅವರ ಮೇಲಿನ ಆರೋಪ ಸಾಬೀತಾಗಿಲ್ಲ ಎಂದು ಮೈಸೂರಿನ ರಸ್ವತಿಪುರಂ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು.
ಆದರೆ ಪೋಲೀಸರ ಸಲ್ಲಿಸಿದ್ದ ವರದಿಯನ್ನು ತಿರಸ್ಕರಿಸಿದ ನ್ಯಾಯಾಲಯ ಶಾಸಕರಿಗೆ ಸಮನ್ಸ್ ಜಾರಿ ಮಾಡಿತ್ತು. ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಶಾಸಕ ರಾಮದಾಸ್ ಹೈಕೋರ್ಟ್ ಮೊರೆ ಹೊಕ್ಕಿದ್ದಾಗ ಹೈಕೋರ್ಟ್ ಶಾಸಕರ ಅರ್ಜಿ ವಜಾ ಮಾಡಿತ್ತು. ಇದಾದ ಅಂತರ ರಾಮದಾಸ್ ಜಾಮೀನಿಗಾಗಿ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ವಾದ ವಿವಾದವನ್ನು ಆಲಿಸಿದ ಜಿಲ್ಲಾ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಎಸ್.ಎ.ರಾಮದಾಸ್ ಅವರಿಗೆ 50 ಸಾವಿರದ ಬಾಂಡ್ ನೀಡುವಂತೆ ಹೇಳಿ ಜಾಮೀನು ಮಂಜೂರು ಮಾಡಿದೆ.