ಸಾರ್ವಜನಿಕ ಗಣೇಶೋತ್ಸವ ಆಚರಣೆ : ಧಾರ್ಮಿಕದತ್ತಿ ಇಲಾಖೆಯಿಂದ ಮಹತ್ವದ ಆದೇಶ

0

ಬೆಂಗಳೂರು : ಗೌರಿ ಗಣೇಶ ಹಬ್ಬ ಸಮೀಪಿಸುತ್ತಿದೆ. ಆದರೆ ಕೊರೊನಾ ಆತಂಕದಿಂದಾಗಿ ಸಾರ್ವಜನಿಕವಾಗಿ ಹಬ್ಬ ಆಚರಣೆಯ ಗೊಂದಲ ಏರ್ಪಟ್ಟಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳು ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸದಂತೆ ನಿಷೇಧ ಹೇರಿವೆ. ಆದ್ರೀಗ ಧಾರ್ಮಿಕ ದತ್ತಿ ಇಲಾಖೆ ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸುವ ಕುರಿತು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತ ಮಹತ್ವದ ಆದೇಶ ಹೊರಡಿಸಿದ್ದಾರೆ.

ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಭಕ್ತರು ಸಾರ್ವನಿಕ ಸ್ಥಳಗಳಲ್ಲಿ ಮಣ್ಣಿನ ಗಣೇಶನ ಮೂರ್ತಿಯನ್ನು ಟೆಂಟ್ ಹೌಸ್ ನಲ್ಲಿ ಇಟ್ಟು ಪೂಜೆ ಸಲ್ಲಿಸುವ ಕುರಿತು ಅನುಮತಿಯನ್ನು ಕೋರಲಾಗಿತ್ತು.

ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ, ರಾಜ್ಯ ಸರಕಾರ ಹಾಗೂ ಆರೋಗ್ಯ ಇಲಾಖೆ ಹೊರಡಿಸಿರುವ ಸುತ್ತೋಲೆಗಳನ್ವಯ ಭಕ್ತಾಧಿಗಳು ಸಾರ್ವಜನಿಕವಾಗಿ ಗೌರಿ ಗಣೇಶನ ಮೂರ್ತಿಗಳನ್ನು ಇಟ್ಟು ಹಬ್ಬ ಆಚರಿಸುವ ಕುರಿತು ಸ್ಥಳೀಯವಾಗಿ ಪರಿಶೀಲನೆಯನ್ನು ನಡೆಸಿ ಆಯಾ ಜಿಲ್ಲಾಧಿಕಾರಿಗಳ ಹಂತದಲ್ಲಿ ಅನುಮತಿಯನ್ನು ನೀಡುವ ಕುರಿತು ಕ್ರಮಕೈಗೊಳ್ಳಬಹುದು ಎಂದು ಆದೇಶ ಹೊರಡಿಸಿದ್ದಾರೆ.

ಆದರೆ ಹಲವು ಜಿಲ್ಲೆಗಳಲ್ಲಿ ಈಗಾಗಲೇ ರಾಜ್ಯದಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಈ ನಡುವಲ್ಲೇ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಜಿಲ್ಲಾಡಳಿತ ಅನುಮತಿ ನೀಡುವ ವಿಚಾರ ಇದೀಗ ಜಿಲ್ಲಾಧಿಕಾರಿಗಳ ಅಂಗಳಕ್ಕೆ ಬಂದು ಬಿದ್ದಿದೆ.

Leave A Reply

Your email address will not be published.