
ಕುಂದಾಪುರ : ಶೆಡ್ ವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುಂದಾಪುರ ಠಾಣೆಯ ಪೊಲೀಸರು ಬಂಧಿಸಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ.

ಉಡುಪಿ ಜಿಲ್ಲೆಯಲ್ಲಿ ಮಾಧಕ ವಸ್ತುಗಳ ಮಾರಾಟ ಜಾಲ ಸಕ್ರೀವಾಗಿದೆ. ಈ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಜಪ್ತಿ ಗ್ರಾಮದ ಇಂಬಾಳಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಪಡೆದ ಗ್ರಾಮಾಂತರ ಠಾಣೆಯ ಪೊಲೀಸರು ಗಾಂಜಾ ಅಡ್ಡೆಯ ಮೇಲೆ ದಾಳಿ ಮಾಡಿದ್ದಾರೆ.

ಕಂಡ್ಲೂರು ನಿವಾಸಿಗಳಾದ ಕರಾಣಿ ಮಹಮ್ಮದ್ ನದೀಮ್(25), ಬೆಟ್ಟಿ ಮಹಮ್ಮದ್ ಅಫ್ಜಲ್ (28) ಎಂಬವರನ್ನು ಪೊಲೀಸರು ಬಂಧಿಸಿದ್ದು, ಪರಾರಿಯಾಗಿರುವ ರಯಾನ್ ಎಂಬಾತನಿಗಾಗಿ ಬಲೆ ಬೀಸಿದ್ದಾರೆ. ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಂಜಾ ಜಾಲ ಬೇಧಿಸಲು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.