ಗೆಜ್ಜೆಗಿರಿ ವಿವಾದ : ಶ್ರೀಧರ ಪೂಜಾರಿ ವರ್ತನೆಗೆ ಮುಂಬೈ ಬಿಲ್ಲವರ ಖಂಡನೆ

ಮುಂಬೈ : ತುಳುನಾಡ ವೀರಪುರುಷರಾದ ಕೋಟಿ ಚೆನ್ನಯ್ಯರ ಮೂಲಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಲ್ ಕ್ಷೇತ್ರದಲ್ಲಿ ಹುಟ್ಟಿಕೊಂಡಿರುವ ವಿವಾದಕ್ಕೆ ಮುಂಬೈ ಸಮಿತಿ ಸಭೆ ನಡೆಸಿದ್ದು, ಕ್ಷೇತ್ರದ ಮಾಲೀಕರಾದ ಶ್ರೀಧರ ಪೂಜಾರಿ ಅವರ ವರ್ತನೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಮುಂಬೈನ ಗೋರೆಗಾಂವ್ ಪೂರ್ವದ ಜಯಲೀಲಾ ಬ್ಯಾಂಕ್ವೇಟ್ ಹಾಲ್ ನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಲ್ ಮುಂಬಯಿ ಸಮಿತಿ ಸಮಾಲೋಚನಾ ಸಭೆ ನಡೆಸಿತು. ಗೆಜ್ಜೆಗಿರಿ ಜೀರ್ಣೋದ್ದಾರ ಕಾರ್ಯಕ್ಕೆ ಗೆಜ್ಜೆಗಿರಿ ಮುಂಬೈ ಸಮಿತಿ ಕೋಟ್ಯಾಂತರ ರೂಪಾಯಿ ಹಣವನ್ನು ದೇಣಿಗೆಯಾಗಿ ನೀಡಿತ್ತು. ಅಲ್ಲದೇ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯಲ್ಲಿ ಗೆಜ್ಜೆಗಿರಿ ವಿವಾದಕ್ಕೆ ಸಂಬಂಧಿಸಿದಂತೆ ಪದಾಧಿಕಾರಿಗಳು ಆಕ್ರೋಶವನ್ನು ವ್ಯಕ್ತಪಡಿಸಿದ್ರು. ಅಲ್ಲದೇ ನ್ಯಾಯಾಲಯದಲ್ಲಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಗೆಜ್ಜೆಗಿರಿ ಸಮಿತಿಯ ಹೋರಾಟಕ್ಕೆ ಬೆಂಬಲವನ್ನು ಸೂಚಿಸಿದ್ದಾರೆ.

ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಮುಂಬೈ ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ಹರೀಶ್ ಜಿ.ಅಮೀನ್, ಪ್ರಮುಖ ಮುಖಂಡರು, ಉದ್ಯಮಿಗಳು, ಗೆಜ್ಜೆಗಿರಿ ಮುಂಬೈ ಸಮಿತಿಯ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Comments are closed.