ನವದೆಹಲಿ : ಸಾಮಾನ್ಯವಾಗಿ ಡ್ರೈವಿಂಗ್ ಲೈಸೆನ್ಸ್ ಪಡೆಯಬೇಕು ಅಂದ್ರೆ ಈಗೆಲ್ಲಾ ತಿಂಗಳುಟ್ಟಲೆ ಕಾಯಬೇಕು. ಆರ್ ಟಿಓ ಕಚೇರಿಗೆ ಅಲೆದು ಅಲೆದು ಸುಸ್ತಾಗಿ ಹೋಗೋದು ಮಾಮೂಲು. ಆದರೆ ಇನ್ಮುಂದೆ ಡಿಎಲ್ ಪದೆಯೋದು ಬಲು ಸುಲಭ, ಅಷ್ಟೇ ಅಲ್ಲಾ 7 ದಿನಗಳಲ್ಲಿಯೇ ಡ್ರೈವಿಂಗ್ ಲೈಸೆನ್ಸ್ ನಿಮ್ಮ ಕೈಸೇರಲಿದೆ.
ಡ್ರೈವಿಂಗ್ ಲೈಸೆನ್ಸ್ ಗೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಹೊಸ ನಿಯಮವನ್ನು ಜಾರಿಗೆ ತರುತ್ತಿದೆ. ಸಾರ್ವಜನಿಕ ಹಿತಾಸಕ್ತಿ ಖಾತರಿ ಕಾಯ್ದೆಯಡಿಯಲ್ಲಿ ಡಿಎಲ್ ಪ್ರಕ್ರಿಯೆ ಕೇವಲ 7 ದಿನಗಳಲ್ಲಿ ಪೂರ್ಣಗೊಳಿಸಲು ಸಾರಿಗೆ ಇಲಾಖೆಗೆ ಕಾಲವಾಶವನ್ನು ನೀಡಲಾಗಿದೆ. ಕೇಂದ್ರ ಸರಕಾರದ ಹೊಸ ಆದೇಶದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ನಿಯಮಗಳನ್ನು ಹಂತ ಹಂತವಾಗಿ ಜಾರಿಗೆ ತರುತ್ತಿದೆ.
ಡ್ರೈವಿಂಗ್ ಲೈಸೆನ್ಸ್ ಪಡೆಯಲು ಆನ್ ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕಾಗಿದ್ದು, ಪ್ರಕ್ರಿಯೆಯನ್ನು ಸಾರಿಗೆ ಇಲಾಖೆ ಸರಳೀಕರಣಗೊಳಿಸಿದೆ. ಅಷ್ಟೇ ಅಲ್ಲ ವಾಣಿಜ್ಯ ಹಾಗೂ ವಾಣಿಜ್ಯೇತರ ವಾಹನಗಳ ನೋಂದಣಿಗೆ ಡಿಜಿಟಲ್ ಸಿಗ್ನೇಚರ್ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡುವ ವ್ಯವಸ್ಥೆಯನ್ನು ಕೂಡ ಜಾರಿಗೆ ತರಲಾಗುತ್ತಿದೆ.
ಅಲ್ಲದೇ ವಾಹನದ ನೋಂದಣಿ ಸಂಖ್ಯೆಯನ್ನು ಪಡೆಯಲು ವಾಹನಗಳ ಮಾಲೀಕರು ಆರ್ ಟಿಓ ಕಚೇರಿಗೆ ಹೋಗುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ