ವಾಹನ ಸವಾರರಿಗೆ ಗುಡ್ ನ್ಯೂಸ್ : ಪೆಟ್ರೋಲ್, ಡಿಸೇಲ್ ಬೆಲೆ 5 ರೂ. ಇಳಿಕೆ..!!!

ನವದೆಹಲಿ : ಕಳೆದ ಕೆಲ ತಿಂಗಳುಗಳಿಂದಲೂ ಡಿಸೇಲ್ ಹಾಗೂ ಪೆಟ್ರೋಲ್ ಬೆಲೆ ಗಗನಮುಖಿಯಾಗುತ್ತಿದೆ. ಆದ್ರೀಗ ಕೇಂದ್ರ ಸರಕಾರ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ಇಳಕೆ ಮಾಡಲು ಪ್ಲ್ಯಾನ್ ರೂಪಿಸಿದೆ. ಹೀಗಾಗಿ ಶೀಘ್ರದಲ್ಲಿಯೇ ಪ್ರತೀ ಲೀಟರ್ ಗೆ 5 ರೂಪಾಯಿ ಇಳಿಕೆಯಾಗುವ ಸಾಧ್ಯತೆಯಿದೆ.

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಗ್ರಾಹಕರಿಗೆ ನುಂಗಲಾರದ ತುತ್ತಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್ ಗೆ 90 ರೂ., ಬೆಂಗಳೂರಿನಲ್ಲಿ 87.04 ರೂಪಾಯಿ ಗರಿಷ್ಠ ಮಟ್ಟ ತಲುಪಿ ಗ್ರಾಹಕರಿಗೆ ಹೊರೆಯಾಗಿರುವ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಲು ಪೆಟ್ರೋಲಿಯಂ ಸಚಿವಾಲಯ ಶಿಫಾರಸು ಮಾಡಿದೆ.

ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಪರಿಶೀಲನೆ ನಡೆಸಿದ್ದು ಗ್ರಾಹಕರಿಗೆ ಪರಿಹಾರವಾಗಿ ಪೆಟ್ರೋಲಿಯಂ ಸಚಿವಾಲಯದ ಶಿಫಾರಸುಗಳನ್ನು ಒಪ್ಪಿದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಲೀಟರ್ ಗೆ 5 ರೂಪಾಯಿ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.

ದೇಶವ್ಯಾಪಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಹೆಚ್ಚಿಸಲಾಗಿತ್ತು. ರಾಜ್ಯ ಸರ್ಕಾರಗಳು ಕೂಡ ವ್ಯಾಟ್ ಹೆಚ್ಚಳ ಮಾಡಿದ್ದವು. ಈಗ ಬೆಲೆ ತೀವ್ರಗತಿಯಲ್ಲಿ ಏರಿಕೆಯಾಗಿರುವುದರಿಂದ ಬೆಲೆ ಕಡಿತಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬಹುದು ಎಂದು ಹೇಳಲಾಗಿದೆ.

Comments are closed.